×
Ad

ಸಂಪೂರ್ಣ ಲಾಕ್‌ಡೌನ್ ಗ್ರಾಪಂ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮ: ಉಡುಪಿ ಜಿಲ್ಲಾಧಿಕಾರಿ

Update: 2021-06-01 20:48 IST

ಉಡುಪಿ ಜೂ.1: ಕೊರೋನ ನಿಯಂತ್ರಿಸುವ ನಿಟ್ಟಿನಲ್ಲಿ ಜೂ.2ರಿಂದ 7ರವರೆಗೆ ಸಂಪೂರ್ಣ ಲಾಕ್‌ಡೌನ್ ಮಾಡಿರುವ 50ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳಿರುವ ಜಿಲ್ಲೆಯ 35 ಗ್ರಾಪಂಗಳನ್ನು ಕೆಲವೊಂದು ವ್ಯವಸ್ಥೆಗಳಿಗೆ ಅವಕಾಶ ಕಲ್ಪಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಜಗದೀಶ್ ಆದೇಶ ಹೊರಡಿಸಿದ್ದಾರೆ.

ಗ್ರಾಪಂ ವ್ಯಾಪ್ತಿಯ ಎಲ್ಲಾ ಆಸ್ಪತ್ರೆಗಳು, ನಸಿರ್ಂಗ್ ಹೋಂಗಳು, ಕ್ಲಿನಿಕ್ಸ್, ಕ್ಲಿನಿಕಲ್ ಲ್ಯಾಬ್ಸ್, ಟೆಲಿಮೆಡಿಸಿನ್ ಸೌಲಭ್ಯಗಳು, ಔಷಧಾಲಯಗಳು, ಜನ ಔಷಧಿ ಕೇಂದ್ರಗಳು, ರಕ್ತ ಸಂಗ್ರಹ ಕೇಂದ್ರಗಳು, ಕೆಎಂಎಫ್ ಹಾಲಿನ ಬೂತು ಕಾರ್ಯನಿರ್ವಹಿಸಲು ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಸೀಮಿತ ಅವಧಿಗೆ ಹಾಲಿನ ಸಂಗ್ರಹಕ್ಕೆ ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಪೆಟ್ರೋಲ್ ಬಂಕ್‌ಗಳು, ಕೃಷಿ ಮತ್ತು ಸಂಬಂಧಿಸಿದ ಚಟುವಟಿಕೆಗಳು, ಅಗತ್ಯ ತುರ್ತು ವೈದ್ಯಕೀಯ ಸೇವೆಯ ವಾಹನಗಳ ಸಂಚಾರಕ್ಕೆ ಹಾಗೂ ಈಗಾಗಲೇ ವಿವಾಹ ಸಮಾರಂಭಕ್ಕೆ ನೀಡಿರುವ ಅನುಮತಿಯಂತೆ, ವಿವಾಹ ಸಮಾರಂಭಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗಿದೆ. ದಿನಪತ್ರಿಕೆ ವಿತರಣೆಗೆ ಯಾವುದೇ ನಿರ್ಬಂಧ ಇಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಈ ಆದೇಶಗಳನ್ನು ಪಾಲಿಸದೇ ಇದ್ದವರ ವಿರುದ್ಧ ಡಿಸ್ಯಾಸ್ಟರ್ ಮೇನೆಜ್ ಮೆಂಟ್ ಆ್ಯಕ್ಟ್ 2005, ಕರ್ನಾಟಕ ಎಪಿಡೆಮಿಕ್ ಡಿಸೀಸಸ್ ಆ್ಯಕ್ಟ್ 2020 ಮತ್ತು ಐ.ಪಿ.ಸಿ ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳ ಲಾಗುವುದು ಎಂದು ಜಿಲ್ಲಾಧಿಕಾರಿಗ ಪ್ರಕಟಣೆ ತಿಳಿಸಿದೆ.

ಈಗಾಗಲೇ ನಾನು ಮತ್ತು ಸಿಇಓ ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಿಡಿಓ, ಕಾರ್ಯಪಡೆಗಳ ಅಧ್ಯಕ್ಷರ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮುಂದಿನ ಐದು ದಿನಗಳ ಕಾಲ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿದೆ. ಅದನ್ನು ಎಲ್ಲರು ಪಾಲನೆ ಮಾಡಬೇಕು. ಆ ಮೂಲಕ ಜಿಲ್ಲೆಯಲ್ಲಿ ಪಾಸಿಟಿವಿಟಿ ಪ್ರಮಾಣ ಕಡಿಮೆ ಮಾಡಿ ಜನರ ಆರೋಗ್ಯವನ್ನು ಕಾಪಾಡಬೇಕಾಗಿದೆ.
-ಜಿ.ಜಗದೀಶ್, ಜಿಲ್ಲಾಧಿಕಾರಿ, ಉಡುಪಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News