×
Ad

ಕುಂದಾಪುರ : ಗುಂಡು ಹಾರಿಸಿ ಕಾಡೆಮ್ಮೆಯ ಹತ್ಯೆ

Update: 2021-06-01 20:57 IST

ಕುಂದಾಪುರ, ಜೂ.1: ನಾಲ್ಕು ವರ್ಷದ ಕಾಡೆಮ್ಮೆಯನ್ನು ಬಂದೂಕಿನಿಂದ ಶೂಟ್ ಮಾಡಿ ಹತ್ಯೆ ಮಾಡಿರುವ ಘಟನೆ ಕುಂದಾಪುರ ತಾಲೂಕಿನ ಹೆಂಗವಳ್ಳಿ ಗ್ರಾಮದ ದೊಡ್ಡಬೆಳ್ಳಾರ್ ಎಂಬಲ್ಲಿ ರವಿವಾರ ರಾತ್ರಿ ನಡೆದಿದೆ.

ಈ ವಿಚಾರ ಸೋಮವಾರ ಮುಂಜಾನೆ ಸ್ಥಳೀಯರ ಗಮನಕ್ಕೆ ಬಂದಿದ್ದು, ಕೂಡಲೇ ಶಂಕರನಾರಾಯಣ ಅರಣ್ಯ ಇಲಾಖೆಗೆ ಹಾಗೂ ಹೆಂಗವಳ್ಳಿ ಗ್ರಾಮ ಪಂಚಾಯತಿಗೆ ಮಾಹಿತಿಯನ್ನು ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅರಣ್ಯ ಅಧಿಕಾರಿಗಳು ಪರಿಶೀಲನೆ ನಡೆಸಿ, ಕಾಡೆಮ್ಮೆಯನ್ನು ಮರಣೋತ್ತರ ಪರೀಕ್ಷೆ ನಡೆಸಿ ಅಂತ್ಯ ಸಂಸ್ಕಾರ ಮಾಡಿಸಿದರು.ಈ ಸಂದರ್ಭದಲ್ಲಿ ಅರಣ್ಯ ಸಂರಕ್ಷಣಾಧಿಕಾರಿ ಲೋಹಿತ್, ಶಂಕರನಾರಾ ಯಣ ವಲಯ ಅರಣ್ಯಧಿಕಾರಿ ಚಿದಾ ನಂದಪ್ಪ, ಹೆಂಗವಳ್ಳಿ ಗ್ರಾಪಂ ಅಧ್ಯಕ್ಷ ರಘುರಾಮ್ ಶೆಟ್ಟಿ ಹಾಗೂ ಅರಣ್ಯ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News