×
Ad

ಸಿಬಿಎಸ್‌ಇ ಪರೀಕ್ಷೆ ರದ್ದು ಹಿನ್ನೆಲೆ: ರಾಜ್ಯದ ಪರಿಸ್ಥಿತಿ ಅವಲೋಕಿಸಿ ಸೂಕ್ತ ತೀರ್ಮಾನ; ಸಚಿವ ಸುರೇಶ್ ಕುಮಾರ್

Update: 2021-06-01 21:19 IST

ಬೆಂಗಳೂರು: ಸಿಬಿಎಸ್ಇ ಹನ್ನೆರಡನೇ ತರಗತಿಯ ಪರೀಕ್ಷೆಗಳನ್ನು ರದ್ದು ಮಾಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಈ ಕುರಿತಂತೆ ರಾಜ್ಯದ  ಪರಿಸ್ಥಿತಿಯನ್ನು ಅವಲೋಕಿಸಿ ಶೀಘ್ರ ತೀರ್ಮಾನ ಪ್ರಕಟಿಸಲಾಗುತ್ತದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೇಂದ್ರೀಯ ಮಂಡಳಿಯು ಪರೀಕ್ಷೆ ರದ್ದು‌ ಮಾಡಿರುವ ಹಿನ್ನೆಲೆ, ರಾಜ್ಯ ಪಠ್ಯಕ್ರಮ ಅನುಸರಿಸಿ‌ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಸ್ಥಿತಿಗತಿಗಳು, ಮೌಲ್ಯಮಾಪನದ ಅವಶ್ಯಕತೆ‌ ಕುರಿತಂತೆ ಈಗಾಗಲೇ ರೂಪಿತವಾಗಿರುವ ಅಭಿಪ್ರಾಯಗಳ ವಿಸ್ತೃತ ಚರ್ಚೆ‌ ನಡೆಸಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಭವಿಷ್ಯದ ಹಿತದೃಷ್ಟಿಯಿಂದ ಶೀಘ್ರದಲ್ಲಿ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News