ಸಿಎಎ ವಿರೋಧಿಸಿ ದ.ಕ.ಜಿಲ್ಲಾದ್ಯಂತ ಎಸ್‌ಡಿಪಿಐ ಪ್ರತಿಭಟನೆ
ಮಂಗಳೂರು ಜೂ.1:ಬಿಜೆಪಿ ನೇತೃತ್ವದ ಕೇಂದ್ರ ಸರಕಾರವು ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶದಿಂದ ವಲಸೆ ಬಂದ ಮುಸ್ಲಿಮೇತರರಿಗೆ ಪೌರತ್ವ ನೀಡುವ ನಿಟ್ಟಿನಲ್ಲಿ ಅವರಿಂದ ಅರ್ಜಿ ಸ್ವೀಕರಿಸುವ ಪ್ರಕ್ರಿಯೆ ಆರಂಭಿಸುವ ಮೂಲಕ ಹಿಂಬಾಗಿಲಿನಿಂದ ಸಿಎಎಯಂತಹ ಜನವಿರೋಧಿ ಕಾಯ್ದೆಯನ್ನು ಜಾರಿಗೆ ತರಲು ಹೊರಟಿರುವ ಕ್ರಮವನ್ನು ಖಂಡಿಸಿ ದ.ಕ.ಜಿಲ್ಲೆಯ 185 ಕಡೆಗಳಲ್ಲಿ ಎಸ್‌ಡಿಪಿಐ ಮಂಗಳವಾರ ಪ್ರತಿಭಟನೆ ನಡೆಸಿದೆ.
ಜಿಲ್ಲೆಯ ಎಸ್‌ಡಿಪಿಐ ಕಾರ್ಯಕರ್ತರು, ನಾಯಕರು, ಬೆಂಬಲಿಗರು ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಭಿತ್ತಿಪತ್ರ ಪ್ರದರ್ಶಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಪ್ರತಿಭಟನೆ ನಡೆಸಿದರು.
ಪಕ್ಷದ ಜಿಲ್ಲಾಧ್ಯಕ್ಷ ಅಥಾವುಲ್ಲಾ ಜೋಕಟ್ಟೆ, ರಾಷ್ಟ್ರೀಯ ನಾಯಕ ರಿಯಾಝ್ ಫರಂಗಿಪೇಟೆ, ರಾಜ್ಯ ಮುಖಂಡರಾದ ಅಶ್ರಫ್ ಮಾಚಾರ್, ಇಕ್ಬಾಲ್ ಬೆಳ್ಳಾರೆ, ಜಿಲ್ಲಾ ಉಪಾಧ್ಯಕ್ಷರಾದ ಇಕ್ಬಾಲ್ ಐಎಂಆರ್, ಪ್ರಧಾನ ಕಾರ್ಯದರ್ಶಿ ಶಾಹುಲ್ ಹಮೀದ್, ಕಾರ್ಯದರ್ಶಿಗಳಾದ ಜಮಾಲ್ ಜೋಕಟ್ಟೆ, ಅಶ್ರಫ್ ಮಂಚಿ, ಜಿಲ್ಲಾ ಮುಖಂಡ ಲ್ಯಾನ್ಸಿ ತೋರಸ್, ಎಲ್ಲಾ ಕ್ಷೇತ್ರ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸಿದ್ದರು ಎಂದು ಜಿಲ್ಲಾ ಕಾರ್ಯದರ್ಶಿ ಹಾಗೂ ಮಾಧ್ಯಮ ಉಸ್ತುವಾರಿ ಅನ್ವರ್ ಸಾದಾತ್ ಬಜತ್ತೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.