×
Ad

ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸಿ ಸಿಪಿಐ-ಸಿಪಿಎಂ ಸದಸ್ಯರ ಮನೆಗಳಲ್ಲಿ ಪ್ರತಿಭಟನೆ

Update: 2021-06-01 22:12 IST

ಮಂಗಳೂರು, ಜೂ 1: ಸಾರ್ವತ್ರಿಕ ಉಚಿತ ಲಸಿಕೆ, ಔಷಧಿ, ನೇರ ನಗದು, ಉಚಿತ ಪಡಿತರ ಮತ್ತಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿಪಿಐ-ಸಿಪಿಎಂ ಸದಸ್ಯರು ಮನೆ ಮನೆಗಳಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರೈತರು ಮತ್ತು ಕಾರ್ಮಿಕರ ವಿರೋಧಿ ಕಾನೂನುಗಳ ರದ್ದತಿಗಾಗಿ 200 ದಿನಗಳ ಉದ್ಯೋಗ ಖಾತರಿಗಾಗಿ, ಕೋವಿಡ್ ಮುಂಚೂಣಿ ಕಾರ್ಯಕರ್ತರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಒತ್ತಾಯಿಸುವ ಭಿತ್ತಿಪತ್ರಗಳನ್ನು ಪ್ರದರ್ಶಿಸಲಾಯಿತು.

ಮಂಗಳೂರು, ಉಳ್ಳಾಲ, ಗುರುಪುರ, ಮೂಡುಬಿದಿರೆ, ಬಂಟ್ವಾಳ, ಬೆಳ್ತಂಗಡಿ, ಸುಳ್ಯದಲ್ಲಿ ಪ್ರತಿಭಟನೆ ನಡೆಸಲಾಯಿತು ಎಂದು ಸಿಪಿಎಂ ದ.ಕ.ಜಿಲ್ಲಾ ಸಮಿತಿ ಕಾರ್ಯದರ್ಶಿ ವಸಂತ ಆಚಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News