ಕಾಪು : ಕ್ಷೇತ್ರಕ್ಕೆ ವಿಶೇಷ ಅನುದಾನಕ್ಕೆ ಸಿಎಂಗೆ ಮನವಿ
ಕಾಪು : ಇತ್ತೀಚಿಗೆ ಸಂಭವಿಸಿದ ಚಂಡಮಾರುತದಿಂದ ಕ್ಷೇತ್ರದ ಕರಾವಳಿ ಭಾಗಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಡಲ್ಕೋರೆತದಿಂದ ಹಾನಿ ಸಂಭಾವಿಸಿದ್ದು, ಈ ಬಗ್ಗೆ ಹೆಚ್ಚಿನ ಮೊತ್ತದ ಅನುದಾನ ಬಿಡುಗಡೆ ಮಾಡುವಂತೆ ಮಾನ್ಯ ಶಾಸಕ ಲಾಲಾಜಿ ಮೆಂಡನ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.
ಮಂಗಳವಾರ ಕೆಲಸ ಕಾರ್ಯಗಳ ನಿಮ್ಮಿತ್ತ ಬೆಂಗಳೂರು ಪ್ರವಾಸದಲ್ಲಿರುವ ಲಾಲಾಜಿ ಆರ್ ಮೆಂಡನ್ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಚಂಡಮಾರುತದಿಂದ ಉಂಟಾದ ಹಾನಿಯ ಬಗ್ಗೆ ವಸ್ತುಸ್ಥಿತಿ ವಿವರಿಸಿದರು.
ರಾಜ್ಯದಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವ ನಿಟ್ಟಿನಲ್ಲಿ ಸಂಕಷ್ಟದಲ್ಲಿರುವರಿಗೆ ಈಗಾಗಲೇ ಘೋಷಣೆ ಮಾಡಿರುವ ವಿಶೇಷ ಪ್ಯಾಕೇಜ್ ನಲ್ಲಿ ಮೀನುಗಾರಿಕೆಯನ್ನೇ ನಂಬಿ ಬದುಕು ಸಾಗಿಸುತ್ತಿರುವ ಕರಾವಳಿ ಮೀನುಗಾರರನ್ನು ಹಾಗೂ ನೇಕಾರರು, ಸಣ್ಣ ಉದ್ಯೋಗ ಮಾಡುತ್ತಿರುವ ಕಾರ್ಮಿಕರಿಗೆ, ಕುಶಲಕಾರ್ಮಿಕರನ್ನು ಕೈಬಿಟ್ಟಿದ್ದು, ಮುಂದಿನ ಪ್ಯಾಕೇಜ್ ನಲ್ಲಿ ಹೆಚ್ಚಿನ ರೀತಿಯಲ್ಲಿ ಪರಿಹಾರ ಒದಗಿಸವ ನಿಟ್ಟಿನಲ್ಲಿ ವಿಶೇಷವಾಗಿ ಪರಿಗಣಿಸುವಂತೆ ಮನವಿ ಮಾಡಿದರು
ಈ ಬಗ್ಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವ ಹಾಗೂ ಇನ್ನಿತರ ಕಾರ್ಯ ಯೋಜನೆಗಳ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮತ್ತು ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡುವುದಾಗಿ ಭರವಸೆ ನೀಡಿದರು