ಕೆಥೊಲಿಕ್ ಸಭಾ ಮಂಗಳೂರು ದಕ್ಷಿಣ ವಲಯದಿಂದ ದಿನಸಿ ಕಿಟ್ ವಿತರಣೆ
ಮಂಗಳೂರು, ಜೂ.3: ಕೆಥೊಲಿಕ್ ಸಭಾ ಮಂಗಳೂರು ದಕ್ಷಿಣ ವಲಯದ ವತಿಯಿಂದ ಹತ್ತು ಚರ್ಚ್ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳ ಕಿಟ್ ವಿತರಣೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಪಾನೀರ್ ಚರ್ಚ್ ಧರ್ಮಗುರು ರೆ.ಫಾ.ಡೆನ್ನಿಸ್ ಸುವಾರಿಸ್ ಕಿಟ್ ವಿತರಣೆಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಕೊರೋನದಿಂದ ಎಷ್ಟು ಕೆಡುಕಾಗಿದೆಯೋ ಅದಕ್ಕಿಂತಲೂ ಮಿಗಿಲಾಗಿ ಸೇವಾ ಮನೋಭಾವವೂ ಜನರಲ್ಲಿ ಬಂದಿದೆ. ಕಿಟ್ ವಿತರಣೆ ನಿಟ್ಟಿನಲ್ಲಿ ಹಲವಾರು ದಾನಿಗಳು ಮುಂದೆ ಬಂದಿರುವುದು ಶ್ಲಾಘನೀಯ ಎಂದರು.
ಮಂಗಳೂರು ದಕ್ಷಿಣ ವಲಯ ಪ್ರಧಾನ ಧರ್ಮಗುರು ಫಾ.ಸಿಪ್ರಿಯನ್ ಪಿಂಟೋ, ಕೆಥೊಲಿಕ್ ಸಭಾ ದಕ್ಷಿಣ ವಲಯ ಉಪಾಧ್ಯಕ್ಷ ಮೆಲ್ವಿನ್ ಡಿಸೋಜ, ಕೋಶಾಧಿಕಾರಿ ರೋಶನ್ ಡಿಸೋಜ, ಪಾನೀರ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಗ್ರೆಟ್ಟಾ ಫೆಲಿಕ್ಸ್ ಡಿಸೋಜ, ಪ್ಲೇವಿ ಡಿಸೋಜ, ವೀರಾ ಡಿಸೋಜ ಇನ್ನಿತರರು ಉಪಸ್ಥಿತರಿದ್ದರು.
ಕೆಥೊಲಿಕ್ ಸಭಾ ಮಂಗಳೂರು ದಕ್ಷಿಣ ವಲಯ ಅಧ್ಯಕ್ಷ ಆಲ್ವಿನ್ ಡಿಸೋಜ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಲವೀನಾ ಗ್ರೆಟ್ಟಾ ವಂದಿಸಿದರು.