×
Ad

ದ್ವಿತೀಯ ಪಿಯು ಪರೀಕ್ಷೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶ ಸುಳ್ಳು: ಡಾ. ಅಶ್ವತ್ಥನಾರಾಯಣ

Update: 2021-06-03 14:38 IST

ಬೆಂಗಳೂರು, ಜೂ.3: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಬಗ್ಗೆ ತನ್ನ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರದಾಡುತ್ತಿರುವುದು ಸಂದೇಶ ಸುಳ್ಳು. ಪರೀಕ್ಷೆ ನಡೆಸುವ ಬಗ್ಗೆ ಯಾವುದೇ ಸಭೆ ಅಥವಾ ಚರ್ಚೆಗಳಲ್ಲಿ ತಾನು ಭಾಗವಹಿಸಲಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಉನ್ನತ ಶಿಕ್ಷಣ ಸಚಿವರು ಆಗಿರುವ ಡಾ. ಅಶ್ವತ್ಥನಾರಾಯಣ, "ರಾಜ್ಯದಲ್ಲಿ ಪರೀಕ್ಷೆಯನ್ನು ನಡೆಸುವ ಬಗ್ಗೆ ಯಾವುದೇ ಸಭೆಗಳು ಅಥವಾ ಚರ್ಚೆಗಳಲ್ಲಿ ನಾನು ಭಾಗವಹಿಸಿಲ್ಲ. ಸಂಬಂಧಪಟ್ಟ ಇಲಾಖೆ ಈ ಕುರಿತು ಉತ್ತಮ ನಿರ್ಧಾರವನ್ನು ತೆಗೆದುಕೊಳ್ಳಲಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಕುರಿತು ಹರಿದಾಡುತ್ತಿರುವ ಯಾವುದೇ ಹೇಳಿಕೆಗಳು ಸತ್ಯಕ್ಕೆ ದೂರ. ಅಂತಹ ಯಾವುದೇ ಸುಳ್ಳು ಸಂದೇಶವನ್ನು ಫಾರ್ವರ್ಡ್ ಮಾಡಬೇಡಿ" ಎಂದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಜುಲೈ 7ರಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ ಎಂಬ ನಕಲಿ ಟ್ವೀಟ್ ಸಂದೇಶವು ಡಾ. ಅಶ್ವತ್ಥನಾರಾಯಣ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಈ ಸ್ಪಷ್ಟೀಕರಣ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News