×
Ad

ರಾಜ್ಯದಲ್ಲಿ ಈವರೆಗೆ 1.41 ಕೋಟಿ ಜನರಿಗೆ ಕೋವಿಡ್ ಲಸಿಕೆ: ಸಿಎಂ ಯಡಿಯೂರಪ್ಪ

Update: 2021-06-03 15:01 IST

ಬೆಂಗಳೂರು, ಜೂ.3: ರಾಜ್ಯ ಸರಕಾರವು ಈ (ಜೂನ್) ತಿಂಗಳಿನಲ್ಲಿ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೋವಿಡ್-19 ವಿರುದ್ಧದ ಲಸಿಕೆಗಳನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ರಾಜ್ಯದಲ್ಲಿ ಇಲ್ಲಿಯವರೆಗೆ 1.41 ಕೋಟಿ ಮಂದಿಗೆ ಲಸಿಕೆಗಳನ್ನು ನೀಡಲಾಗಿದೆ. ಈ ತಿಂಗಳ ಅಂತ್ಯದ ವೇಳೆಗೆ 2 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News