ಕನ್ನಡದ ಕುರಿತು ಅಪಪ್ರಚಾರ ಮಾಡಿದ ಗೂಗಲ್ ವಿರುದ್ಧ ಕಾನೂನು ಕ್ರಮ: ಸಚಿವ ಅರವಿಂದ ಲಿಂಬಾವಳಿ

Update: 2021-06-03 12:34 GMT

ಬೆಂಗಳೂರು, ಜೂ.3: ಕನ್ನಡವನ್ನು ಕೊಳಕು ಭಾಷೆಯೆಂದು ಬಿಂಬಿಸಿದ ಗೂಗಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ.

ಭಾರತದ ಕೊಳ ಭಾಷೆ ಯಾವುದು ಎಂದು ನೆಟ್ಟಿಗರು ಗೂಗಲ್ ಸರ್ಚ್ ನಲ್ಲಿ ಪ್ರಶ್ನೆ ಮಾಡಿದರೆ ಕನ್ನಡ ಎಂಬ ಉತ್ತರ ಬರುತ್ತಿತ್ತು. ಈ ವಿಚಾರವನ್ನು ತಿಳಿದ ಸಚಿವ ಅರವಿಂದ ಲಿಂಬಾವಳಿ, ಇದು ಅತ್ಯಂತ ಖಂಡನೀಯ ಸಂಗತಿ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 2500 ವರ್ಷಗಳ ಹಿಂದೆಯೇ ಕನ್ನಡ ಭಾಷೆ ಅಸ್ತಿತ್ವದಲ್ಲಿತ್ತು ಎಂದು ಸಾಬೀತಾಗಿದೆ. ಜೊತೆಗೆ ಕನ್ನಡಕ್ಕೆ ತನ್ನದೇ ಆದ ಇತಿಹಾಸವಿದ್ದು, ಕನ್ನಡ ಭಾಷೆ ಕನ್ನಡಿಗರ ಹೆಮ್ಮೆ. ಆದರೆ ಭಾರತದಲ್ಲಿ ಕೆಟ್ಟ(ugliest) ಭಾಷೆ ಎಂದರೆ ನಮ್ಮ ನುಡಿಯಾದ ಕನ್ನಡ ಎಂದು ಉತ್ತರ ಬರುತ್ತಿದೆ ಹೀಗಾಗಿ ಗೂಗಲ್ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವ ಕೆಲಸ ಮಾಡಿದೆ, ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ಗೂಗಲ್ ಕನ್ನಡಿಗರ ಕ್ಷಮೆ ಕೇಳಬೇಕು. ಕನ್ನಡ ಭಾಷೆಯ ಕುರಿತು ಅಪಪ್ರಚಾರ ಮಾಡಿದ ಗೂಗಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News