ದ.ಕ. ಜಿಲ್ಲೆ : ಕೋವಿಡ್‌ಗೆ 5 ಬಲಿ; 598 ಮಂದಿಗೆ ಕೊರೋನ ಪಾಸಿಟಿವ್
Update: 2021-06-03 19:58 IST
ಮಂಗಳೂರು, ಜೂ.3: ದ.ಕ. ಜಿಲ್ಲೆಯಲ್ಲಿ ಗುರುವಾರ 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 928ಕ್ಕೇರಿದೆ. ಅಲ್ಲದೆ ಗುರುವಾರ ಜಿಲ್ಲೆಯಲ್ಲಿ 598 ಮಂದಿಗೆ ಕೊರೋನ ಸೋಂಕು ದೃಢಪಡುವುದರೊಂದಿಗೆ ಈವರೆಗೆ ಕೊರೋನ ಸೋಂಕಿಗೊಳಗಾದವರ ಸಂಖ್ಯೆ 77,951ಕ್ಕೇರಿದೆ.
ಗುರುವಾರ 877 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಅದರಂತೆ ಈವರೆಗೆ ಗುಣಮುಖ ರಾದವರ ಸಂಖ್ಯೆ 69,056ಕ್ಕೇರಿದೆ. ಸದ್ಯ ಜಿಲ್ಲೆಯಲ್ಲಿ 7,967 ಸಕ್ರಿಯ ಪ್ರಕರಣವಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರಗೆ 8,59,919 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,81,968 ಮಂದಿಯ ವರದಿ ನೆಗೆಟಿವ್ ಬಂದಿದೆ.
ದಂಡ ವಸೂಲಿ: ಮಾಸ್ಕ್ ನಿಯಮ ಉಲ್ಲಂಘಿಸಿದ 60,656 ಮಂದಿಯಿಂದ 71,48,717 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.