ದ.ಕ. ಜಿಲ್ಲೆ: ಕೋವಿಡ್ ಶೀಲ್ಡ್ ಲಸಿಕೆ ವಿವರ
ಮಂಗಳೂರು, ಜೂ.3: ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಆರೋಗ್ಯಕೇಂದ್ರಗಳು, ನಗರ ಆರೋಗ್ಯ ಕೇಂದ್ರಗಳು, ತಾಲೂಕು ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಜೂ.4ರಂದು ಕೋವಿಡ್ ಶೀಲ್ಡ್ ಲಸಿಕೆಯನ್ನು ನೀಡಲಾಗುವುದು
ಮಂಗಳೂರಿನ 10 ನಗರ ಆರೋಗ್ಯ ಕೇಂದ್ರಗಳಾದ ಜೆಪ್ಪು, ಎಕ್ಕೂರು, ಪಡೀಲ್, ಶಕ್ತಿನಗರ, ಕುಂಜತ್ತಬೈಲು, ಬಿಜೈ ಕಾಪಿಕಾಡ್(ಲೇಡಿಹಿಲ್), ಕುಳಾಯಿ, ಕಸಬ ಬೆಂಗ್ರೆ, ಬಂದರ್, ಸುರತ್ಕಲ್ ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರಗಳಾದ ಉಳ್ಳಾಲ, ಬಂಟ್ವಾಳ ಮತ್ತು ಪುತ್ತೂರಿನಲ್ಲಿರುವ ನಗರ ಆರೋಗ್ಯ ಕೇಂದ್ರಕ್ಕೆ ಬರುವ ಫಲಾನುಭವಿಗಳು ಕಡ್ಡಾಯವಾಗಿ ಆನ್‌ಲೈನ್‌ನಲ್ಲಿ www.cowin.gov.in ನಲ್ಲಿ ನೋಂದಣಿ ಮಾಡಿಸಿಕೊಂಡು ಲಸಿಕೆಯನ್ನು ಪಡೆಯಬಹುದಾಗಿದೆ.
ಈ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಟೋಕನ್ ಪದ್ದತಿಗೆ ಅವಕಾಶರುವುದಿಲ್ಲ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಂಡ ಫಲಾನುಭವಿಗಳಿಗೆ ಮಾತ್ರ ಲಸಿಕೆಯನ್ನು ಪಡೆಯಲು ಅವಕಾಶ ಇರುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.