×
Ad

ಬ್ಯಾಂಕ್ ಆಫ್ ಬರೋಡಾದಿಂದ ದ.ಕ. ಜಿಲ್ಲಾಡಳಿತಕ್ಕೆ ವೈದ್ಯಕೀಯ ಕಿಟ್ ಹಸ್ತಾಂತರ

Update: 2021-06-03 20:59 IST

ಮಂಗಳೂರು, ಜೂ.3: ಕೊರೋನ ಸೋಂಕು ಚಿಕಿತ್ಸೆಗೆ ಅಗತ್ಯವಿರುವ ಗ್ಲುಕೋಮೀಟರ್, ಬಿಪಿ ಮೋನಿಟರ್, ಥರ್ಮೋಸ್ಕ್ಯಾನರ್, ಮಾಸ್ಕ್, ಸ್ಯಾನಿಟೈಸರ್ ಒಳಗೊಂಡ 14.80 ಲಕ್ಷ ರೂ. ಮೌಲ್ಯದ ವೈದ್ಯಕೀಯ ಕಿಟ್‌ಗಳನ್ನು ಬ್ಯಾಂಕ್ ಆಫ್ ಬರೋಡಾ ವತಿಯಿಂದ ದ.ಕ. ಜಿಲ್ಲಾಡಳಿತಕ್ಕೆ ಹಸ್ತಾಂತರಿಸಲಾಯಿತು.

ಗುರುವಾರ ಜಿಪಂ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ಯಾಂಕ್‌ನ ಪ್ರಧಾನ ವ್ಯವಸ್ಥಾಪಕಿ ಮತ್ತು ವಲಯ ಮುಖ್ಯಸ್ಥೆ ಗಾಯತ್ರಿ ಆರ್. ಅವರು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರಿನಿವಾಸ ಪೂಜಾರಿಗೆ ಹಸ್ತಾಂತರಿಸಿದರು.

ಜಿಲ್ಲಾಡಳಿತವು ಕೊರೋನ ನಿಯಂತ್ರಣಕ್ಕೆ ಎಲ್ಲಾ ರೀತಿಯಿಂದಲೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಗ್ರಾಪಂ ಮಟ್ಟದಲ್ಲಿ ಟಾಸ್ಕ್ ಪೋರ್ಸ್ ಸಮಿತಿಗಳು ಕೂಡ ಯುದ್ಧೋಪಾದಿಯಲ್ಲಿ ಕೆಲಸ ಮಾಡುತ್ತಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ದ.ಕ.ಜಿಪಂ ಸಿಇಒ ಡಾ. ಕುಮಾರ್, ಬ್ಯಾಂಕ್‌ನ ಉಪ ಪ್ರಧಾನ ವ್ಯವಸ್ಥಾಪಕ ಮತ್ತು ವಲಯ ಮುಖ್ಯಸ್ಥ ಗೋಪಾಲಕೃಷ್ಣ ಆರ್., ಮಂಗಳೂರು ಕ್ಷೇತ್ರೀಯ ಪ್ರಮುಖ ಕಿರಣ್ ರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News