ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತಿದ್ದೇವೆ ಎಂದ ಗೂಗಲ್ ಇಂಡಿಯಾ

Update: 2021-06-03 16:07 GMT

ವಿಶ್ವದ ಅತ್ಯಂತ ಜನಪ್ರಿಯ ಸರ್ಚ್ ಇಂಜಿನ್ ಆಗಿರುವ ಗೂಗಲ್ ನಲ್ಲಿ ಗುರುವಾರ Ugliest language in india (ಭಾರತದ ಕೊಳಕು ಭಾಷೆ) ಎಂದು ಹುಡುಕಿದಾಗ 'ಕನ್ನಡ' ಎಂಬ ಉತ್ತರವನ್ನು ವೆಬ್‌ಸೈಟ್ ಒಂದು ನೀಡಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಬಗ್ಗೆ ಗೂಗಲ್ ಇಂಡಿಯಾ ಕ್ಷಮೆಯಾಚಿಸಿದ್ದು, ''ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಭಾವನೆಗಳಿಗೆ ಧಕ್ಕೆಯಾಗಿದ್ದರೆ ಕ್ಷಮೆ ಯಾಚಿಸುತ್ತಿದ್ದೇವೆ'' ಎಂದು ತಿಳಿಸಿದೆ.

ಈ ಬಗ್ಗೆ ಗೂಗಲ್ ಇಂಡಿಯಾ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಲಾಗಿದ್ದು, ಕನ್ನಡದಲ್ಲೇ ಕ್ಷಮೆಯಾಚನೆ ಮಾಡಲಾಗಿದೆ.

''ಹುಡುಕುವುದು ಯಾವಾಗಲೂ ಪರಿಪೂರ್ಣವಾಗಿರುವುದಿಲ್ಲ. ಕೆಲವೊಮ್ಮೆ, ಇಂಟರ್ನೆಟ್ ನಲ್ಲಿ ನಿರ್ದಿಷ್ಟವಾದ ಹುಡುಕಾಟಗಳಿಗೆ ಬರುವ ಫಲಿತಾಂಶಗಳು ಆಶ್ಚರ್ಯವನ್ನುಂಟು ಮಾಡುತ್ತವೆ. ಇದು ಸೂಕ್ತವಲ್ಲ ಎಂಬುದು ನಮಗೆ ಗೊತ್ತು. ಆದರೆ ಯಾವುದೇ ಒಂದು ಸಮಸ್ಯೆ ಎದುರಾದಾಗ ಮತ್ತು ನಮ್ಮ ಗಮನಕ್ಕೆ ಬಂದಾಗ ನಾವು ಕ್ಷಿಪ್ರವಾಗಿ ಸಮರ್ಪಕ ಕ್ರಮ ತೆಗೆದುಕೊಳ್ಳುತ್ತೇವೆ ಮತ್ತು ನಮ್ಮ ಅಲ್ಗೊರಿಧಂ ಅನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಸದಾ ಕ್ರಿಯಾಶೀಲವಾಗಿರುವುದನ್ನು ಮುಂದುವರಿಸಿದ್ದೇವೆ. ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತಿದ್ದೇವೆ” ಎಂದು ಟ್ವೀಟ್ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News