ಸುಳ್ಯ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ರವಾನೆ: ಆರೋಪಿಯ ಬಂದನಕ್ಕೆ ಆಗ್ರಹ
Update: 2021-06-03 22:25 IST
ಸುಳ್ಯ : ಶಾಂತಿನಗರ ನಿವಾಸಿ ಅಭಿಲಾಶ್ ಎಂಬವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ ಸಂದೇಶ ರವಾನೆ ಮಾಡಿದ್ದಾರೆ ಮತ್ತು ಕೊಲೆ ಬೆದರಿಕೆ ಹಾಕಿರುವುದಾಗಿ ಬಜರಂಗದಳದ ಮುಖಂಡ ಲತೀಶ್ ಗುಂಡ್ಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಅಂಬೇಡ್ಕರ್ ರಕ್ಷಣಾ ವೇದಿಕೆಯ ಅಧ್ಯಕ್ಷ ಸುಂದರ ಪಾಟಾಜೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪುತ್ತೂರು ವಿಭಾಗದ ಡಿವೈಎಸ್ಪಿ ಮತ್ತು ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿ ಆಂಬುಲೆನ್ಸ್ ಚಾಲಕ ಶಾಂತಿನಗರ ನಿವಾಸಿ ಅಭಿಲಾಶ್ ಎಂಬವರು ಕೋವಿಡ್ ರೋಗಿಯೊಬ್ಬರ ಕುಟುಂಬಸ್ಥರಿಂದ 7 ಸಾವಿರ ರೂ. ಪಡೆದಿದ್ದಾರೆ ಎಂದು ಆರೋಪ ಮಾಡಿ ಸಾಮಾಜಿಕ ಜಾಲತಾಣ ವಾದ ಫೇಸ್ಬುಕ್, ವಾಟ್ಸ್ಆ್ಯಪ್ ಗಳಲ್ಲಿ ಹರಿಬಿಟ್ಟಿರುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.