×
Ad

ಅಬೂಬಕ್ಕರ್ ಸಂಪಿಲ

Update: 2021-06-03 23:05 IST

ಕೊಣಾಜೆ: ಇರಾ ಸಂಪಿಲ ನಿವಾಸಿ ಅಬೂಬಕ್ಕರ್ (64) ಗುರುವಾರ ಅಸೌಖ್ಯದಿಂದ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಅವರು ಮುಡಿಪು ಪೇಟೆಯಲ್ಲಿ ಹಣ್ಣಿನ ವ್ಯಾಪಾರಿ ಯಾಗಿದ್ದರು.

ಅಬೂಬಕ್ಕರ್  ಸಂಪಿಲರ ನಿಧನಕ್ಕೆ  ಶಾಸಕ ಯು ಟಿ ಖಾದರ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರಶಾಂತ್ ಕಾಜವ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷರಾದ ಚಂದ್ರಹಾಸ ಕರ್ಕೇರಾ, ಮೊಹಮ್ಮದ್ ಮೋನು, ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಮಮತಾ ಡಿ ಎಸ್ ಗಟ್ಟಿ, ಇರಾ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ, ಅಬ್ದುಲ್ ರಹಿಮಾನ್ ಸಂಪಿಲ, ಪದ್ಮನಾಭ ನರಿಂಗಾನ, ಮುಡಿಪು ಬ್ಲಾಕ್ ಕಾಂಗ್ರೆಸ್ ಪ್ರಮುಖರಾದ ಅಬ್ದುಲ್ ಜಲೀಲ್ ಮೊಂಟುಗೋಳಿ, ಅಬ್ದುಲ್ ನಾಸೀರ್ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News