ಮಾನವ ಕಳ್ಳಸಾಗಾಣಿಕೆ: ಬಾಂಗ್ಲಾದೇಶದ ಮೂಲದ ಆರೋಪಿ ಬಂಧನ

Update: 2021-06-03 18:28 GMT

ಬೆಂಗಳೂರು, ಜೂ.3: ಮಾನವ ಕಳ್ಳಸಾಗಾಣಿಕೆಯಲ್ಲಿ ತೊಡಗಿದ್ದ ಆರೋಪಿಯನ್ನು ಬಾಂಗ್ಲಾದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.

ಬಾಂಗ್ಲಾದೇಶದ ಢಾಕಾ ಮೂಲದ ರಫೀಕ್ ಎಂಬಾತ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಬಾಂಗ್ಲಾದಿಂದ ಭಾರತಕ್ಕೆ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ವಿಚಾರ ಬೆಳಕಿಗೆ ಬಂದಿದೆ.

ರಫೀಕ್ ಸೇರಿದಂತೆ ಬಂಧಿತ ಇತರೆ ಆರೋಪಿಗಳು ಹಲವರನ್ನು ಅಕ್ರಮವಾಗಿ ಭಾರತಕ್ಕೆ ಕರೆತರುತ್ತಿದ್ದರು. ಪದೇ ಪದೇ ಬಾಂಗ್ಲಾದಿಂದ ಬೆಂಗಳೂರಿಗೆ ರಫೀಕ್ ಬಂದು ಹೋಗುತ್ತಿದ್ದ. ಈತ ಲೈಂಗಿಕ ದೌರ್ಜನ್ಯ ಘಟನೆಗೂ ಮುನ್ನ ನಗರಕ್ಕೆ ಬಂದು ಹೋಗಿರುವುದು ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದಾರೆ.

ನಗರ ಪೊಲೀಸರು ನೀಡಿದ ಮಾಹಿತಿ ಮೇರೆಗೆ ಆರೋಪಿಯನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿರುವುದು ತಿಳಿದು ಬಂದಿದೆ. ಇದುವರೆಗೂ ಅಕ್ರಮವಾಗಿ ಎಷ್ಟು ಜನರನ್ನು ಮಾನವ ಕಳ್ಳ ಸಾಗಣಿಕೆ ಮಾಡಲಾಗಿದೆ ಎಂಬುದರ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿಗಳ ವಿಚಾರಣೆ ಮುಂದುವರೆಸಿರುವ ಪೊಲೀಸರು ಶೀಘ್ರದಲ್ಲೇ ತನಿಖೆ ಪೂರ್ಣಗೊಳಿಸಿ ಚಾರ್ಜ್‍ಶೀಟ್ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ಇದುವರೆಗೂ 10 ಮಂದಿ ಆರೋಪಿಗಳ ಬಂಧನವಾಗಿದ್ದು, ಮತ್ತೊಬ್ಬನಿಗಾಗಿ ಹುಡುಕಾಟ ನಡೆಸುತ್ತಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News