ದ್ವಿತೀಯ ಪಿಯು ಪರೀಕ್ಷೆ ರದ್ದು: ಸಚಿವ ಎಸ್.ಸುರೇಶ್ ಕುಮಾರ್

Update: 2021-06-04 05:32 GMT

ಬೆಂಗಳೂರು, ಜೂ.4: ರಾಜ್ಯದಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ಬೆಳಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋವಿಡ್ ಸಾವುನೋವಿನ ನಡುವೆ 12 ರಿಂದ 13 ದಿನಗಳ ಕಾಲ ದ್ವಿತೀಯ ಪಿಯು ಪರೀಕ್ಷೆ ನಡೆಸಲು ಅಸಾಧ್ಯ‌. ಹೀಗಾಗಿ ಕಳೆದ ವರ್ಷದ ಪ್ರಥಮ ಪಿಯು ಫಲಿತಾಂಶವನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶವನ್ನು ಪ್ರಕಟಿಸಲಾಗುವುದೆಂದು ವಿವರಿಸಿದ್ದಾರೆ.

ಕೋವಿಡ್ ಮೂರನೇ ಅಲೆಯಿಂದ ಮಕ್ಕಳು ಹೆಚ್ಚು ಬಾಧಿತರಾಗಲಿದ್ದಾರೆಂಬ ಆತಂಕ. ವ್ಯಕ್ತವಾಗಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಈ ತೀರ್ಮಾನಕ್ಕೆ ಬರಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ವರ್ಷ ಪ್ರಥಮ ಪಿಯು ಪರೀಕ್ಷೆಯನ್ನು ಜಿಲ್ಲಾ ಮಟ್ಟದಲ್ಲಿ ನಡೆಲಾಗಿದೆ. ಇದನ್ನೇ  ಬಳಸಿಕೊಂಡು ದ್ವಿತೀಯ ಪಿಯು ಪರೀಕ್ಷೆಯನ್ನು ಗ್ರೇಡ್ ಆಧಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು. ಇದೇವೇಳೆ ಈ ಫಲಿತಾಂಶದಿಂದ ಸಮಾಧಾನವಿಲ್ಲದಿರುವ ವಿದ್ಯಾರ್ಥಿಗಳಿಗೆ ಕೋವಿಡ್ ಅಲೆ ಇಳಿಮುಖವಾದ ಬಳಿಕ ಪರೀಕ್ಷೆ ನಡೆಸಲಾಗುವುದು ಎಂದು ವಿವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News