×
Ad

ಮಂಡ್ಯ: ಹಳ್ಳಕ್ಕೆ ಉರುಳಿದ ಕಾರು ಬೆಂಕಿಗಾಹುತಿ: ಒಂದೇ ಕುಟುಂಬದ ಮೂವರು ಸಜೀವ ದಹನ

Update: 2021-06-04 11:44 IST

ಮಂಡ್ಯ, ಜೂ.4: ಕಾರೊಂದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದ್ದರಿಂದ ಓರ್ವ 11ರ ಹರೆಯದ ಬಾಲಕ ಸಹಿತ ಒಂದೇ ಕುಟುಂಬದ ಮೂವರು ಸಜೀವ ದಹನಗೊಂಡ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪ ಇಂದು ಮುಂಜಾನೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಬೆಂಗಳೂರು ಮೂಲದ ಶೇಖ್ ಫೈಝಲ್(44), ಮೆಹಕ್(33) ಹಾಗೂ ಶೇಖ್ ಆದಿಲ್(11) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಕನಕಪುರ ರಸ್ತೆಯಲ್ಲಿರುವ ಮಹದೇಶ್ವರ ಪೆಟ್ರೋಲ್ ಬಂಕ್ ಬಳಿ ಈ ಅಪಘಾತ ಸಂಭವಿಸಿದೆ. ಕಾರು ಚಾಮರಾಜನಗರದ ಹನೂರಿನಿಂದ ಬೆಂಗಳೂರಿನತ್ತ ಹೋಗುತ್ತಿದ್ದ ವೇಳೆ ಹಲಗೂರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಹಳ್ಳಕ್ಕೆ ಉರುಳಿದೆ. ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ಕಾರಿನಿಂದ ಹೊರಬರಲಾಗದೆ ಮೂವರು ಸಜೀವ ದಹನವಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಸ್ಥಳೀಯರು ಬೆಂಕಿ ನಂದಿಸಲು ಶ್ರಮಿಸಿದ್ದಾರೆ.

ಘಟನೆಯ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News