ಕೊರೋನ ಯೋಧರ ಮೇಲಿನ ಹಲ್ಲೆ ಸಹಿಸಲಾಗದು: ಪೊಲೀಸ್ ಆಯುಕ್ತ ಶಶಿಕುಮಾರ್
Update: 2021-06-04 16:53 IST
ಮಂಗಳೂರು, ಜೂ. 4: ವೈದ್ಯರು, ಆರೋಗ್ಯ ಕಾರ್ಯಕರ್ತರು ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಕೋವಿಡ್‌ನಂತಹ ತುರ್ತು ಸಂದರ್ಭದಲ್ಲಿ ಮುಂಚೂಣಿಯಲ್ಲಿದ್ದು ಸೇವೆ ಸಲ್ಲಿಸುತ್ತಿರುವ ಕೊರೋನ ಯೋಧರುಗಳ ಮೇಲಿನ ಹಲ್ಲೆಯನ್ನು ಸಹಿಸುವಂತಿಲ್ಲ. ಸಾರ್ವಜನಿಕರು ಈ ಬಗ್ಗೆ ಸಹಕರಿಸಬೇಕು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯರ ಮೇಲಿನ ಹಲ್ಲೆ ಹಾಗೂ ಕೋವಿಡ್ ಸೋಂಕಿಂತ ಗರ್ಭಿಣಿಗೆ ಚಿಕಿತ್ಸೆ ನಿರಾಕರಣೆ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಂಡಿದೆ. ಕರ್ತವ್ಯದಲ್ಲಿದ್ದ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದ್ದು, ಪ್ರಮುಖ ಆರೋಪಿಯ ಪತ್ತೆ ಕಾರ್ಯ ಮುಂದುವರಿದಿದೆ. ಈ ನಡುವೆ ಮಹಿಳೆ ಹೇಳಿಕೆಯ ಪಡೆದಿದ್ದು, ಅದನ್ನು ಮುಂದಿನ ಕ್ರಮಕ್ಕಾಗಿ ಜಿಲ್ಲಾಧಿಕಾರಿಗೆ ನೀಡಲಾಗಿದೆ ಎಂದು ತಿಳಿಸಿದರು.