ಶ್ರೀಕ್ಷೇತ್ರ ಧರ್ಮಸ್ಥಳದಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ
ಉಡುಪಿ, ಜೂ.4: ಶ್ರೀಕ್ಷೇತ್ರ ಧರ್ಮಸ್ಥಳ ಸಂಸ್ಥೆಯಿಂದ ಉಡುಪಿ ಜಿಲ್ಲಾಸ್ಪತ್ರೆಗೆ ಕೊಡುಗೆಯಾಗಿ ನೀಡಿದ ಐದು ಆಕ್ಸಿಜನ್ ಕಾನ್ಸಂಟ್ರೇಟರ್‌ಗಳನ್ನು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉುಪ ಅವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಗಣೇಶ್ ಬಿ., ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ, ಯೋಜನೆಯ ಪದಾಧಿಕಾರಿಗಳು, ತಾಲೂಕು ವೈದ್ಯಾಧಿಕಾರಿ ಉಪಸ್ಥಿತರಿದ್ದರು
ಈಗಾಗಲೇ ಉಡುಪಿ ಜಿಲ್ಲಾಸ್ಪತ್ರೆಗೆ ಸಂಸ್ಥೆಯಿಂದ 5.5ಟನ್ ಪ್ರಾಣವಾಯು ಆಕ್ಸಿಜನ್ ಒದಗಿಸಲಾಗಿದೆ. ಜಿಲ್ಲಾ ವ್ಯಾಪ್ತಿಯಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾ. ಯೋಜನೆಯ ಆರು ಯೋಜನಾ ಕಛೇರಿಗಳ ಮುಖಾಂತರ 6 ವಾಹನಗಳನ್ನು ಕೋವಿಡ್ ಶಂಕಿತ ರೋಗಿಗಳನ್ನು, ಸೋಂಕು ದೃಢಪಟ್ಟ ರೋಗಿಗಳನ್ನು ಆಸ್ಪತ್ರೆ ಗಳಿಗೆ ಕರೆದುಕೊಂಡು ಹೋಗುವುದು ಮತ್ತು ಆಸ್ಪತ್ರೆಯಿಂದ ಮನೆಗೆ ಮುಟ್ಟಿಸುವ ವ್ಯವಸ್ಥೆ ಮಾಡಲಾಗಿದ್ದು, ಈವರೆಗೆ 134 ರೋಗಿಗಳ ಸಂಚಾರಕ್ಕೆ ಬಳಸಲಾಗಿದೆ ಎಂದು ಯೋಜನೆಯ ಉಡುಪಿ ಜಿಲ್ಲಾ ನಿರ್ದೇಶಕ ಗಣೇಶ್ ಬಿ.ತಿಳಿಸಿದರು.