×
Ad

ಜೂ. 6ರಂದು ಕಾಪುವಿನಲ್ಲಿ ಯುವ ಕಾಂಗ್ರೆಸ್‍ನಿಂದ ರಕ್ತದಾನ

Update: 2021-06-04 23:00 IST

ಕಾಪು : ಯುವ ಕಾಂಗ್ರೆಸ್ ಕಾಪು ಬ್ಲಾಕ್ ವತಿಯಿಂದ ಜೂ. 6ರಂದು ರಾಜೀವ್ ಭವನದಲ್ಲಿ ಸ್ಬಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಲಿದೆ.

ಕೋವಿಡ್-19 ಪ್ರಕರಣಗಳು ಹೆಚ್ಚುತಿರುವ ಹಿನ್ನಲೆಯಲ್ಲಿ ಲಾಕ್‍ಡೌನ್ ಉಂಟಾಗಿದ್ದು, ಪರಿಣಾಮ ಜಿಲ್ಲೆಯಲ್ಲಿ ರಕ್ತದ ಸಂಗ್ರಹದಿಂದ ಕಡಿಮೆ ಯಾಗುತ್ತಿರುವ ಹಿನ್ನಲೆಯಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಬೆಳಗ್ಗೆ 8.30ರಿಂದ ಮಧ್ಯಾಹ್ನ 1ರವರೆಗೆ ರಕ್ತದಾನ ಶಿಬಿರ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಈ ಶಿಬಿರದಲ್ಲಿ ಪಾಲ್ಗೊಳ್ಳಬೇಕು ಎಂದು ಕಾಪು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರಮೀಝ್ ಹುಸೈನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News