ಇಂದು ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

Update: 2021-06-07 08:16 GMT

ಹೊಸದಿಲ್ಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸೋಮವಾರ ಸಂಜೆ 5 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು NDTV ವರದಿ ಮಾಡಿದೆ.

ಇಂದು ಸಂಜೆ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ (ಪಿಎಂಒ) ಟ್ವೀಟ್ ಮಾಡಿದೆ.

ಎಪ್ರಿಲ್-ಮೇ ತಿಂಗಳಲ್ಲಿ ಉಲ್ಬಣಗೊಂಡಿದ್ದ ಕೋವಿಡ್ ಪ್ರಕರಣಗಳು ಈಗ ಕಡಿಮೆಯಾಗುತ್ತಿರುವ ಸಮಯದಲ್ಲಿ ಪ್ರಧಾನಿ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಕೋವಿಡ್ ಎರಡನೇ ಅಲೆಯಿಂದಾಗಿ ದೇಶದ ಕೆಲವು ಭಾಗಗಳಲ್ಲಿ ಕಟ್ಟುನಿಟ್ಟಾದ ಲಾಕ್‌ಡೌನ್‌ ವಿಧಿಸಲಾಗಿತ್ತು.

ರಾಜ್ಯಗಳು ಮತ್ತು ತಜ್ಞರುಗಳ ಟೀಕೆಗೆ ಗುರಿಯಾಗಿರುವ  ತಮ್ಮ ಸರಕಾರದ ವ್ಯಾಕ್ಸಿನೇಷನ್ (ಲಸಿಕೆ) ನೀತಿಯ ಕುರಿತು ಪ್ರಧಾನಿ ಮೋದಿಯವರು ಮಾತನಾಡಲಿದ್ದಾರೆ ಎಂದು ವರದಿಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News