×
Ad

​ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರತಿಭಟನೆ

Update: 2021-06-07 13:31 IST

ಮಂಗಳೂರು : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಇಂದು ಪ್ರತಿಭಟನೆ ನಡೆಯಿತು.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್, ಪ್ರಧಾನಿ ಮೋದಿ ನೇತೃತ್ವದ ಸರಕಾರ ಪದೇ ಪದೇ ಡೀಸೆಲ್, ಪೆಟ್ರೋಲ್ ಜತೆಗೆ ಅಡುಗೆ ಅನಿಲ ಬೆಲೆ ಏರಿಕೆ ಮಾಡಿ ಈ ಕೊರೋನ ಸಂಕಷ್ಟದಲ್ಕಿ ಮತ್ತಷ್ಟು ತೊಂದರೆ ಕೊಡುತ್ತಿದೆ ಎಂದರು.

ಶಾಹುಲ್ ಹಮೀದ್ ಮಾತನಾಡಿ, ಆತ್ಮನಿರ್ಭರತೆಯ ವಿಶ್ವಾಸ ನೀಡಿದ ಕೇಂದ್ರ ಸರಕಾರ ಜನರ ಆತ್ಮಹತ್ಯೆಗೆ ಪ್ರಚೋದನೆ ನೀಡುತ್ತಿದೆ ಎಂದು ಆರೋಪಿಸಿದರು.

ಒಂದು ತಿಂಗಳ ಅವಧಿಯಲ್ಕಿ 18 ಬಾರಿ ತೈಲಗಳ ಬೆಲೆ ಏರಿಕೆ ಮಾಡಲಾಗಿದೆ. 30 ರೂ.ಗೆ ಸಿಗಬೇಕಿದ್ದ ಪೆಟ್ರೋಲ್ ಬೆಲೆ 100 ರೂ. ದಾಟಿದೆ. ಜನರ ಶಾಪ ಸರಕಾರಕ್ಕೆ ತಟ್ಟದಿರದು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ, ಸದಾಶಿವ ಉಳ್ಳಾಲ್, ರಮಾನಂದ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News