ಸಹಿ ಸಂಗ್ರಹ, ರಾಜಕೀಯ ಹೇಳಿಕೆ ನೀಡದೆ ಕೋವಿಡ್ ನಿಯಂತ್ರಣಕ್ಕೆ ಕೆಲಸ ಮಾಡಿ: ಬಿಜೆಪಿ ಶಾಸಕರಿಗೆ ಬಿಎಸ್‌ವೈ ಸೂಚನೆ

Update: 2021-06-07 11:33 GMT

ಬೆಂಗಳೂರು, ಜೂ.7: ನಾಯಕತ್ವ ಬದಲಾವಣೆ, ದಿಲ್ಲಿ ಪ್ರಯಾಣ, ಸಹಿ ಸಂಗ್ರಹಗಳ ರಾಜಕೀಯ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಜೆಪಿ ಶಾಸಕರಿಗೆ ಕೆಲ ಕಿವಿಮಾತುಗಳನ್ನು ಹೇಳಿದ್ದು, ರಾಜಕೀಯ ಹೇಳಿಕೆಗಳನ್ನು ನೀಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೋವಿಡ್ ಸಾಂಕ್ರಾಮಿಕದಿಂದ ಜನ ಸಂಕಷ್ಟಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ, ಪ್ರತಿಯೊಬ್ಬ ಬಿಜೆಪಿ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಗಳಿಗೆ ಆದ್ಯತೆ ನೀಡಬೇಕು. ಯಾರೂ ಕೂಡ ಸಹಿ ಸಂಗ್ರಹಿಸುವುದಾಗಲಿ, ರಾಜಕೀಯ ಹೇಳಿಕೆಗಳನ್ನು ನೀಡುವುದಾಗಲಿ ಮಾಡದೆ, ಸಂಕಷ್ಟದಲ್ಲಿರುವ ಜನರಿಗೆ ನೆರವಾಗಬೇಕು ಎಂದು ವಿನಂತಿಸುತ್ತೇನೆ ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News