×
Ad

ಕಾರು ಅಪಘಾತ: ಗಾಯಾಳು ಯುವತಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಕಾರನ್ನು ಮೇಲಕ್ಕೆತ್ತಲು ನೆರವಾದ ಶಾಸಕ ಹಾಲಪ್ಪ

Update: 2021-06-07 17:32 IST

ಶಿವಮೊಗ್ಗ, ಜೂ.7: ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾದ ಕಾರಿನಲ್ಲಿದ್ದವರನ್ನು ರಕ್ಷಣೆ ಮಾಡಿ ಶಾಸಕ ಹರತಾಳು ಹಾಲಪ್ಪ ಮಾನವೀಯತೆ ಮರೆದಿದ್ದಾರೆ.

ಸೊರಬ ಮಾರ್ಗವಾಗಿ ತೆರಳುತ್ತಿದ್ದ ಕಾರೊಂದು ಲಿಂಗದಹಳ್ಳಿ (ಕೆರೋಡಿ ಕ್ರಾಸ್) ಸಮೀಪದಲ್ಲಿ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿತ್ತು. ಈ ಸಂದರ್ಭದಲ್ಲಿ ಅದೇ ಮಾರ್ಗವಾಗಿ ಬರುತ್ತಿದ್ದ ಹಾಲಪ್ಪ ಅವರು ತಮ್ಮ ವಾಹನವನ್ನು ನಿಲ್ಲಿಸಿ, ಸಹಾಯಕ್ಕೆ ತೆರಳಿದ್ದಾರೆ. ಅಲ್ಲಿದ್ದ ಸ್ಥಳೀಯರ ಸಹಾಯ ಪಡೆದು, ಅಪಘಾತಕ್ಕೀಡಾಗಿದ್ದ ಕಾರನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ ಗಾಯಗೊಂಡಿದ್ದ ಚೇತನಾ ಜೈನ್ ಎಂಬ ಯುವತಿಗೆ ಪ್ರಥಮ ಚಿಕಿತ್ಸೆ ಕೊಡಿಸಿ, ಸಾಗರದ ಆಸ್ಪತ್ರೆಗೆ ಅವರನ್ನು ರವಾನಿಸಿದ್ದಾರೆ.

ಶಾಸಕರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News