×
Ad

​ಮುಖ್ಯಮಂತ್ರಿ ಬದಲಾವಣೆಯಲ್ಲಿ ಗೊಂದಲವಿಲ್ಲ: ಸಚಿವ ಕೋಟ

Update: 2021-06-07 21:28 IST

ಕುಂದಾಪುರ, ಜೂ.7: ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಎಲ್ಲರೂ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗೆ ನಿಂತು ಕರ್ನಾಟಕ ರಾಜ್ಯವನ್ನು ಕೊರೋನಾ ಮುಕ್ತವಾಗಿಸಲಿದ್ದಾರೆ. ಅದರತ್ತ ನಾವು ಯಶಸ್ವಿ ಹೆಜ್ಜೆ ಇಡುತ್ತಿದ್ದೇವೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಕುಂದಾಪುರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತಾಡಿದ ಅವರು, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕೂಡ ಮುಖ್ಯಮಂತ್ರಿಯಾಗಿ ಯಡಿ ಯೂರಪ್ಪನವರೇ ಮುಂದುವರೆಯಲಿದ್ದಾರೆ ಎಂದು ಹೇಳಿದ್ದಾರೆ. ಇದರಲ್ಲಿ ಗೊಂದಲವಿಲ್ಲ. ರಾಜ್ಯದ ಜನತೆಗೆ ಸುಭದ್ರ ಆಡಳಿತ ನೀಡಲಿದ್ದೇವೆ ಎಂದರು.

ಯತ್ನಾಳ್, ಯೋಗೀಶ್ವರ್ ವಿರುದ್ಧ ಹೈಕಮಾಂಡ್ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕಾರಣದಲ್ಲಿ ಕೆಲವು ಗುಡುಗು, ಸಿಡಿಲು, ಮಿಂಚು ಬರುತ್ತಿರುತ್ತದೆ. ಕೊನೆಗೆ ತಣ್ಣನೆ ಮಳೆ ಬಂದು ವಾತಾವರಣ ತಿಳಿಯಾಗುತ್ತದೆ. ಹಾಗಾಗಿ ರಾಜಕೀಯದಲ್ಲಿ ಸಣ್ಣ, ಪುಟ್ಟ ಅಪಸ್ವರಗಳು ಎದ್ದಾಗ ರಾಜ್ಯಾಧ್ಯಕ್ಷರು ಕರೆದು ತಿಳಿವಳಿಕೆ ಹೇಳುತ್ತಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News