×
Ad

ಸಿಎಂ ಬದಲಾದರೆ ಹೊಸ ಸಂಪುಟದಲ್ಲಿ ಸಚಿವನಾಗುವ ವಿಶ್ವಾಸವಿದೆ: ಶಾಸಕ ಅಪ್ಪಚ್ಚು ರಂಜನ್

Update: 2021-06-07 22:05 IST

ಮಡಿಕೇರಿ, ಜೂ.7: ಮುಖ್ಯಮಂತ್ರಿಗಳು ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ವಿಚಾರ ನನಗೆ ತಿಳಿಯದು, ಮಾಧ್ಯಮಗಳಿಂದಷ್ಟೇ ತಿಳಿದುಕೊಂಡೆ. ಒಂದು ವೇಳೆ ಮುಖ್ಯಮಂತ್ರಿಗಳು ಬದಲಾದರೆ ಹೊಸ ಸಚಿವ ಸಂಪುಟದಲ್ಲಿ ಸಚಿವನಾಗಲು ನಾನೂ ಕೂಡ ಆಕಾಂಕ್ಷಿ ಎಂದು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ತಿಳಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ, ಪಕ್ಷದ ನಿರ್ಧಾರವೇ ಅಂತಿಮ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಪುತ್ರನಿಗೆ ಅವಕಾಶ ನೀಡುವುದಾಗಿ ಹೇಳಿಕೆ ನೀಡಿರುವ ವಿಚಾರ ನನಗೆ ಗೊತ್ತಿಲ್ಲವೆಂದು ಸ್ಪಷ್ಟಪಡಿಸಿದರು.

ಒಂದು ವೇಳೆ ಮುಖ್ಯಮಂತ್ರಿಗಳು ಬದಲಾದರೆ, ಹೊಸ ಸಂಪುಟ ರಚನೆಯಾಗುತ್ತದೆ. ಆ ಸಂದರ್ಭ ನನಗೂ ಸಚಿವ ಸ್ಥಾನ ಸಿಗುತ್ತದೆ ಎನ್ನುವ ವಿಶ್ವಾಸವಿದೆ. ಐದು ಬಾರಿ ಶಾಸಕನಾದ ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಅಪ್ಪಚ್ಚು ರಂಜನ್ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News