ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
Update: 2021-06-07 22:33 IST
ಉಡುಪಿ, ಜೂ.7: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಉಡುಪಿ- ಬಾರ್ಕೂರು ರೈಲ್ವೆ ಹಳಿಕಂಬದ ಬಳಿ ಸೋಮವಾರ ಸುಮಾರು 40 ವಷರ್ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮೃತನ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಮಣಿಪಾಲ ಪೊಲೀಸ್ ಠಾಣೆ (ದೂ.ಸಂಖ್ಯೆ:0820-2570328, ಮೊ.ನಂ: 9480805448, 9480805475) ಅಥವಾ ಉಡುಪಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಮ್ (ದೂ.ಸಂಖ್ಯೆ:0820-2526444)ನ್ನುಸಂಪರ್ಕಿಸುವಂತೆ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.