×
Ad

ಜೂ.9ರಂದು ಉಡುಪಿ ಜಿಲ್ಲಾ ನ್ಯಾಯಾಧೀಶರಿಂದ ಎಂಡೋಸಲ್ಫಾನ್ ಸಂತ್ರಸ್ಥರ ಭೇಟಿ

Update: 2021-06-08 23:07 IST

ಉಡುಪಿ, ಜೂ.8: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧ್ಯಕ್ಷ ಹಾಗೂ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯ ಮೂರ್ತಿ ಅರವಿಂದಕುಮಾರ್ ಇವರ ನಿರ್ದೇಶನದಂತೆ ಎಂಡೋಸಲ್ಫಾನ್ ಕೀಟನಾಶಕದ ದುಷ್ಪರಿಣಾಮಕ್ಕೆ ತುತ್ತಾಗಿ ದೈಹಿಕ ಹಾಗೂ ಮಾನಸಿಕ ನ್ಯೂನತೆಯಿಂದ ನರಳುತ್ತಿರುವ ಸಂತ್ರಸ್ಥರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಿ ವರದಿ ಕಳುಹಿಸಲು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಜೂ.9ರಂದು ಸಂತ್ರಸ್ಥರನ್ನು ಭೇಟಿ ಮಾಡಲಿದ್ದಾರೆ.

ಜೂ.9ರ ಅಪರಾಹ್ನ 3:30ಕ್ಕೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದಲ್ಲಿ ಎಂಡೋಸಲ್ಫಾನ್ ಸಂತ್ರಸ್ಥರಾದ ಮಣಿಕಂಠ (8 ವರ್ಷ) ಹೆರಿಂಜಾಲು, ರೋಶನಿ (4), ನಾಗಮ್ಮ (25) ಮತ್ತು ಮಹಮ್ಮದ್ ಐಯಾನ್ (8) ಕಂಬದಕೋಣೆ, ರಂಜಿತ (21), ತರಣ್ (5) ಮತ್ತು ತನ್ಮಯಿ (14) ಹೆರೂರು ಇವರನ್ನು ನ್ಯಾಯಾಧೀಶು ಭೇಟಿ ಮಾಡಲಿದ್ದಾರೆ.

ಮೇಲಿನ ಎಲ್ಲಾ ಸಂತ್ರಸ್ಥರು ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಾಜರಿರುವಂತೆ ಹಿರಿಯ ಸಿವಿಲ್ ನ್ಯಾಯಾಧೀಶೆ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಕಾವೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News