×
Ad

ಉಡುಪಿ: ಜೂ.9ರಂದು ಲಸಿಕೆ ಲಭ್ಯತೆ ವಿವರ

Update: 2021-06-08 23:12 IST

ಉಡುಪಿ, ಜೂ.8: ಜಿಲ್ಲೆಯಲ್ಲಿ ಜೂ.9ರಂದು 45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆಯ ಸೇಂಟ್ ಸಿಸಿಲಿ ಶಾಲೆಯಲ್ಲಿ (200 ಡೋಸ್), ಮಣಿಪಾಲ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆಯಲ್ಲಿ (100 ಡೋಸ್) ಹಾಗೂ ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಖಾಸಗಿ ಆಂಗ್ಲ ಮಾಧ್ಯಮ ಶಾಲೆ ಅಂಬಲಪಾಡಿ ಇಳ್ಲಿ (50 ಡೋಸ್) ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನೀಡಲಾಗುವುದು.

ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು ಹಾಗೂ ದುರ್ಬಲ ಗುಂಪಿನ ಫಲಾನುಭವಿ ಗಳಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ನಗರದ ಸರಕಾರಿ ತಾಯಿ ಮತ್ತು ಮಕ್ಕಳ (ಬಿಆರ್‌ಎಸ್) ಆಸ್ಪತ್ರೆಯಲ್ಲಿ (150 ಡೋಸ್), ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸರಕಾರಿ ಪ್ರಾಥಮಿಕ ಶಾಲೆ ಆದಿಉಡುಪಿ (100 ಡೋಸ್), ಕುಕ್ಕಿಕಟ್ಟೆ ಎಫ್‌ಪಿಎಐನ ಇಂದಿರಾ ನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (50 ಡೋಸ್) ಲಸಿಕೆ ನೀಡಲಾಗುವುದು.

45 ವರ್ಷ ಮೇಲ್ಪಟ್ಟ ಸಾರ್ವಜನಿಕರಿಗೆ ಹಾಗೂ ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ 2ನೇ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ಮಣಿಪಾಲ ನಗರ ಪ್ರಾಥುಕ ಆರೋಗ್ಯ ಕೇಂದ್ರದ ಮಾಧವ ಕೃಪಾ ಶಾಲೆಯಲ್ಲಿ (50 ಡೋಸ್) ಹಾಗೂ ಕುಕ್ಕಿಕಟ್ಟೆ ಎಫ್‌ಪಿಎಐನ ಇಂದಿರಾನಗರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (50 ಡೋಸ್) ಲಸಿಕೆ ನೀಡಲಾಗುವುದು.

ಗ್ರಾಮೀಣ ಪ್ರದೇಶದಲ್ಲಿ ರಾಜ್ಯ ಸರಕಾರ ಗುರುತಿಸಿರುವ ಅನುಬಂಧ-1 ರಲ್ಲಿರುವ ಕೊರೋನ ಮುಂಚೂಣಿ ಕಾರ್ಯಕರ್ತರು, ದುರ್ಬಲ ಗುಂಪಿನ ಫಲಾನುಭವಿಗಳು ಮತ್ತು 45 ವರ್ಷ ಮೇಲ್ಪಟ್ಟ ಸಾರ್ವಜನಿಕರು, ಕೇಂದ್ರ ಸರಕಾರ ಗುರುತಿಸಿರುವ ಮುಂಚೂಣಿ ಕಾರ್ಯಕರ್ತರಿಗೆ ಪ್ರಥಮ ಡೋಸ್ ಕೋವಿಶೀಲ್ಡ್ ಲಸಿಕೆ, 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಹಾಗೂ ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆ ಅಥವಾ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯನ್ನು ಖಚಿತಪಡಿಸಿಕೊಂಡು ಜೂನ್ 9ರಂದು ಲಸಿಕಾ ಕೇಂದ್ರಕ್ಕೆ ಬಂದು ಲಸಿಕೆ ಪಡೆಯಬೇಕು.

ಕೋವಿಶೀಲ್ಡ್ ಮೊದಲ ಡೋಸ್ ಲಸಿಕೆ ಪಡೆದು 84 ದಿನ ಮೀರಿದವರು 2ನೇ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲು ಹಾಗೂ ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 6 ವಾರ ಮೀರಿದವರು ಕೋವ್ಯಾಕ್ಸಿನ್ 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿರುತ್ತಾರೆ.

ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಪ್ರಥಮ ಡೋಸ್ ಎಲ್ಲೂ ಲಭ್ಯವಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ನಾಗಭೂಷಣ ಉಡುಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News