ಆಸ್ಪತ್ರೆಯಲ್ಲಿ ಕೋವಿಡ್ ಪೀಡಿತ ಮಹಿಳೆಯ ಅತ್ಯಾಚಾರ ಯತ್ನ ಆರೋಪ: ಆಸ್ಪತ್ರೆ ಸಿಬ್ಬಂದಿ ಬಂಧನ

Update: 2021-06-09 07:18 GMT

ಕಲಬುರಗಿ, ಜೂ.9: ಇಲ್ಲಿನ ಜಿಮ್ಸ್ ಆಸ್ಪತ್ರೆಯಲ್ಲಿ 25 ವರ್ಷದ ಮಹಿಳೆಯ ಮೇಲೆ ಆಸ್ಪತ್ರೆಯ ಸಿಬ್ಬಂದಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆನ್ನಲಾದ ಘಟನೆ ನಿನ್ನೆ ತಡರಾತ್ರಿ ನಡೆದಿದೆ.

ಕಾಳಗಿ ತಾಲೂಕಿನ ನಿವಾಸಿಯಾಗಿರುವ ಕೋವಿಡ್ ಪೀಡಿತ ಮಹಿಳೆ ಜೂನ್ 2 ರಂದು ಜಿಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ನಿನ್ನೆ ತಡರಾತ್ರಿ ಆಸ್ಪತ್ರೆಯ ಸಿಬ್ಬಂದಿಯಾದ ಪಿಂಟು ಎಂಬಾತ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.

ಘಟನೆಯ ಕುರಿತು ಮಹಿಳೆಯ ಪತಿ ಮತ್ತು ಕುಟುಂಬಸ್ಥರು ಬ್ರಹ್ಮಪುರ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿ  ಪಿಂಟುವನ್ನು ಇಂದು ಬೆಳಗ್ಗೆ ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News