ಮಂಗಳೂರು ವಿಮಾನ ನಿಲ್ದಾಣ 'ಅದಾನಿ'ಗೆ ಹಸ್ತಾಂತರ: ಕೇಂದ್ರದ ನೀತಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

Update: 2021-06-09 15:10 GMT

ಬೆಂಗಳೂರು, ಜೂ. 9: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿ ಹೊಣೆಯನ್ನು ಅದಾನಿ ಎಂಟರ್ ಪ್ರೈಸಸ್ ಲಿಮಿಟೆಡ್‍ಗೆ ಗುತ್ತಿಗೆಗೆ ನೀಡಲು ಕೇಂದ್ರ ಸರಕಾರದ ಹೊಂದಿರುವ ನೀತಿ ಏನು ಎಂಬುದನ್ನು ಸಲ್ಲಿಸುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಮಂಗಳೂರು ವಿಮಾನ ನಿಲ್ದಾಣ ಪ್ರಾಧಿಕಾರ ಉದ್ಯೋಗಿಗಳ ಸಂಘ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಮೇಲ್ನೋಟಕ್ಕೆ ವಿಮಾನ ನಿಲ್ದಾಣವನ್ನು ಗುತ್ತಿಗೆ ನೀಡಿರುವುದು ಎಎಐನ ಸೆಕ್ಷನ್ 12 ಮತ್ತು 12ಎಗೆ ವಿರುದ್ಧವಾಗಿದೆ. ಹೀಗಾಗಿ, ಈ ಕುರಿತು ಕೇಂದ್ರ ಸರಕಾರದ ನೀತಿ ಏನಿದೆ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಸೂಚಿಸಿದ ನ್ಯಾಯಪೀಠವು, ವಿಚಾರಣೆಯನ್ನು ಜುಲೈ 9ಕ್ಕೆ ಮುಂದೂಡಿತು.

ಅರ್ಜಿದಾರರು, ಸರಕಾರಿ-ಖಾಸಗಿ ಸಹಭಾಗಿತ್ವ ಯೋಜನೆಯಡಿ ಅಹಮದಾಬಾದ್, ಜೈಪುರ, ಲಖನೌ, ಗೋವಾ, ಗುವಾಹಟಿ ಮತ್ತು ಮಂಗಳೂರು ವಿಮಾನ ನಿಲ್ದಾಣ ಕಾರ್ಯಾಚರಣೆ, ನಿರ್ವಹಣೆ ಮತ್ತು ಅಭಿವೃದ್ಧಿ ಮಾಡಲು 2018ರ ನ.8ರಂದು ಕೇಂದ್ರ ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ. ಅದು ಕಾನೂನುಬಾಹಿರ ಕ್ರಮ ಮತ್ತು ವಿಮಾಣ ನಿಲ್ದಾಣ ಪ್ರಾಧಿಕಾರ ಕಾಯಿದೆಯ ಉಲ್ಲಂಘನೆ ಎಂದು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News