ಕರಾವಳಿ ಕಾವಲು ಪೊಲೀಸ್ ಎಸ್ಪಿ ಆರ್.ಚೇತನ್ ವರ್ಗಾವಣೆ
Update: 2021-06-09 20:55 IST
ಉಡುಪಿ, ಜೂ.9: ಉಡುಪಿ ಜಿಲ್ಲಾ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಆರ್.ಚೇತನ್ ಐಪಿಎಸ್ ಅವರನ್ನು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.
ಇವರು 2019ರ ಆಗಸ್ಟ್ ತಿಂಗಳಲ್ಲಿ ಕರಾವಳಿ ಕಾವಲು ಪೊಲೀಸ್‌ನ ಎಸ್ಪಿ ಯಾಗಿ ಅಧಿಕಾರ ಸ್ವೀಕರಿಸಿ ಕಳೆದ ಒಂದು ವರ್ಷ 9ತಿಂಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಇವರಿಂದ ಖಾಲಿಯಾದ ಹುದ್ದೆಗೆ ಸರಕಾರ ಬೇರೆ ಅಧಿಕಾರಿಗಳನ್ನು ನಿಯೋಜಿಸದ ಹಿನ್ನೆಲೆಯಲ್ಲಿ ನಕ್ಸಲ್ ನಿಗ್ರಹ ಪಡೆಯ ಎಸ್ಪಿ ನಿಖಿಲ್, ಕರಾವಳಿ ಕಾವಲು ಪೊಲೀಸ್‌ನ ಪ್ರಭಾರ ಎಸ್ಪಿಯಾಗಿ ಅಧಿಕಾರ ವಹಿಸಿ ಕೊಂಡಿದ್ದಾರೆ.