ಕೊಲೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ವಿರುದ್ಧ ಎಫ್‍ಐಆರ್

Update: 2021-06-10 13:52 GMT

ಕಲಬುರ್ಗಿ, ಜೂ.10: ವ್ಯಕ್ತಿಯೋರ್ವನ ಕೊಲೆ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ವಿರುದ್ಧ ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಥಮ ವರ್ತಮಾನ ವರದಿ (ಎಫ್‍ಐಆರ್) ದಾಖಲಾಗಿದೆ ಎಂದು ವರದಿಯಾಗಿದೆ.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಅವರ ಸಹೋದರ ಹನುಮಂತ ಎಂಬಾತನನ್ನು ಜೇವರ್ಗಿ ತಾಲೂಕಿನ ಬಳ್ಳುಂಡಗಿ ಗ್ರಾಮದಲ್ಲಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದರು. ಈ ಘಟನೆಗೆ ಸಂಬಂಧಪಟ್ಟಂತೆ ಒಟ್ಟು 30 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಕೊಲೆಯಾದ ಹನುಮಂತ ಹಾಗೂ ಆತನ ಸಹೋದರ ಶಾಂತಪ್ಪ ಸಹ ಜೇವರ್ಗಿ ತಾಲೂಕಿನ ಮಯೂರ ಗ್ರಾಮದ ಬಿಜೆಪಿ ಮುಖಂಡ ಶಿವಲಿಂಗ ಭಾವಿಕಟ್ಟಿ ಎಂಬವರ ಕೊಲೆ ಪ್ರಕರಣದ ಆರೋಪದಲ್ಲಿ ಜೈಲಿಗೆ ಹೋಗಿದ್ದರು. ಇತ್ತೀಚಿಗೆ ಜಾಮೀನು ಪಡೆದು ಜೈಲಿಂದ ಹೊರ ಬಂದಿದ್ದರು.

ಬಳಿಕ, ಜೂ.7 ರಂದು ಹನುಮಂತ ಕೊಡಲಗಿ ಕಾರಿನಲ್ಲಿ ಹೋಗುತ್ತಿದ್ದಾಗ ದುಷ್ಕರ್ಮಿಗಳು ಅಡ್ಡಗಟ್ಟಿ ಕೊಲೆಗೈದಿದ್ದರು. ಘಟನೆ ಸಂಬಂಧ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ಹಾಗೂ ಸಹೋದರ ಬಸವರಾಜ್ ಪಾಟೀಲ್ ವಿರುದ್ಧ ಕೊಲೆಗೆ ಕುಮ್ಮಕ್ಕು ನೀಡಿರುವ ಆರೋಪ ಕೇಳಿ ಬಂದ ಹಿನ್ನೆಲೆ ಎಫ್‍ಐಆರ್ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News