ಉಡುಪಿ: ಗುರುವಾರ 289 ಮಂದಿಗೆ ಕೊರೋನ ಪಾಸಿಟಿವ್, ಇಬ್ಬರು ಸೋಂಕಿತರು ಸಾವು

Update: 2021-06-10 14:42 GMT
ಸಾಂದರ್ಭಿಕ ಚಿತ್ರ

ಉಡುಪಿ, ಜೂ.10: ಗುರುವಾರ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 289ಕ್ಕೆ ಇಳಿದಿದೆ. ಇಂದು ಇಬ್ಬರು ಮೃತಪಟ್ಟರೆ, 241 ಮಂದಿ ಚಿಕಿತ್ಸೆಯಿಂದ ಗುಣಮುಖರಾಗಿದ್ದಾರೆ. ಸದ್ಯ 3812 ಮಂದಿ ಸಕ್ರಿಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಗುರುವಾರ ಕಾರ್ಕಳ ತಾಲೂಕಿನ 72ರ ಹರೆಯದ ಮಹಿಳೆ ಹಾಗೂ ಉಡುಪಿ ತಾಲೂಕಿನ 74 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 353ಕ್ಕೇರಿದೆ. ಇಬ್ಬರೂ ಕೋವಿಡ್ ಗುಣಲಕ್ಷಣದೊಂದಿಗೆ ಉಸಿರಾಟ ತೊಂದರೆಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯಲ್ಲಿದ್ದರು.

ಬುಧವಾರ ಪಾಸಿಟಿವ್ ಬಂದ 289 ಮಂದಿಯಲ್ಲಿ 139 ಮಂದಿ ಪುರುಷರು ಹಾಗೂ 150 ಮಂದಿ ಮಹಿಳೆಯರು. ಇವರಲ್ಲಿ ಉಡುಪಿ ತಾಲೂಕಿನ 126, ಕುಂದಾಪುರ ತಾಲೂಕಿನ 122 ಹಾಗೂ ಕಾರ್ಕಳ ತಾಲೂಕಿನ 40 ಮಂದಿ ಇದ್ದು, ಉಳಿದೊಬ್ಬರು ಹೊರಜಿಲ್ಲೆಯಿಂದ ಚಿಕಿತ್ಸೆಗೆಂದು ಬಂದವರು. ಇವರಲ್ಲಿ 13 ಮಂದಿ ಕೋವಿಡ್ ಆಸ್ಪತ್ರೆ ಹಾಗೂ 276 ಮಂದಿ ಹೋಮ್ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.

ನಿನ್ನೆ ಒಟ್ಟು 241ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಈವರೆಗೆ ಕೊರೋನದಿಂದ ಚೇತರಿಸಿಕೊಂಡವರ ಸಂಖ್ಯೆ ಈಗ 59,416ಕ್ಕೇರಿದೆ. ನಿನ್ನೆ ಜಿಲ್ಲೆಯ 3606 ಮಂದಿ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಸೋಂಕಿಗೆ ಪಾಸಿಟಿವ್ ಬಂದವರ ಸಂಖ್ಯೆ 63,581 ಆಗಿದೆ ಎಂದು ಡಾ.ಉಡುಪ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ ಈವರೆಗೆ ಒಟ್ಟು 6,26,292 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದೆ.

ಗುರುವಾರ ಜಿಲ್ಲೆಯಲ್ಲಿ ಕಪ್ಫು ಶಿಲೀಂದ್ರ ಸೋಂಕಿಗಾಗಿ ಚಿಕಿತ್ಸೆಯಲ್ಲಿದ್ದ 9 ಮಂದಿಯಲ್ಲಿ ನಾಲ್ವರು ಸಂಪೂರ್ಣ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಒಟ್ಟು 12 ಮಂದಿ ಚೇತರಿಸಿಕೊಂಡಿದ್ದರೆ, ಐವರು ಮಾತ್ರ ಈಗ ಮಣಿಪಾಲ ಕೆಎಂಸಿ ಹಾಗೂ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಸೋಂಕಿಗೆ ಜಿಲ್ಲೆಯ ಇಬ್ಬರು ಬಲಿಯಾಗಿದ್ದಾರೆ.

2450 ಮಂದಿಗೆ ಕೋವಿಡ್ ಲಸಿಕೆ
ಜಿಲ್ಲೆಯಲ್ಲಿ ಗುರುವಾರ ಒಟ್ಟು 2450 ಮಂದಿ ಕೋವಿಡ್ ಲಸಿಕೆಯನ್ನು ಸ್ವೀಕರಿಸಿದ್ದಾರೆ. ಇವರಲ್ಲಿ 2146 ಮಂದಿ ಲಸಿಕೆಯ ಮೊದಲ ಡೋಸ್ ಸ್ವೀಕರಿಸಿದರೆ, 304 ಮಂದಿ ಎರಡನೇ ಡೋಸ್ ಪಡೆದಿದ್ದಾರೆ ಎಂದು ಡಿಎಚ್‌ಓ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.

ಇಂದು 18ರಿಂದ 44 ವರ್ಷದೊಳಗಿನ 1809 ಮಂದಿ ಮೊದಲ ಡೋಸ್‌ನ್ನು ಪಡೆದಿದ್ದಾರೆ. 45 ವರ್ಷ ಮೇಲಿನ 326 ಮಂದಿ ಮೊದಲ ಡೋಸ್ ಹಾಗೂ 287 ಮಂದಿ ಎರಡನೇ ಡೋಸ್‌ನ್ನು ಪಡೆದಿದ್ದಾರೆ. 22 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 9 ಮಂದಿ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆ ಸ್ವೀಕರಿಸಿದವರಲ್ಲಿ ಸೇರಿದ್ದಾರೆ.

ಜಿಲ್ಲೆಯಲ್ಲಿ ಇದುವರೆಗೆ 2,91,353 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದರೆ, 88,574 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ ಎಂದು ಡಾ.ಉಡುಪ ತಿಳಿಸಿದರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News