ದ.ಕ.ಜಿಲ್ಲೆಯಲ್ಲಿ ಮಳೆ ಮತ್ತಷ್ಟು ಚುರುಕು

Update: 2021-06-10 15:20 GMT

ಮಂಗಳೂರು, ಜೂ.10: ದ.ಕ.ಜಿಲ್ಲೆಯಲ್ಲಿ ಗುರುವಾರ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿವೆ. ಗುರುವಾರ ಮಧ್ಯಾಹ್ನದ ಬಳಿಕ ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ಅಪರಾಹ್ನದ ಬಳಿಕ ಮಳೆ ಬಿಡುವು ಪಡೆದುಕೊಂಡರೂ ಕೂಡ ತಣ್ಣಗಿನ ವಾತಾವರಣ ಕಂಡು ಬಂದಿದೆ.

ಜಿಲ್ಲೆಯ ಗ್ರಾಮೀಣ ಭಾಗದ ಬಂಟ್ವಾಳ, ಪುತ್ತೂರು ತಾಲೂಕಿನ ಹಲವು ಕಡೆ ಮಳೆ ಬಿರುಸು ಪಡೆದಿತ್ತು. ನಗರದ ಕೆಲವು ಕಡೆ ಸಾಧಾರಣದಿಂದ ಉತ್ತಮ ಮಳೆಯಾಗಿದೆ. ಮಾಣಿಲದಲ್ಲಿ ಜಿಲ್ಲೆಯಲ್ಲೇ ಅತ್ಯಧಿಕ ಅಂದರೆ 71 ಮಿ.ಮೀ ಮಳೆಯಾಗಿದೆ. ಪಾಣಾಜೆ 46, ಇರಾ 44.5 ಮತ್ತು ಬನ್ನೂರಿನಲ್ಲಿ 41 ಮಿ.ಮೀ. ಮಳೆ ಸುರಿದಿದೆ.

ಶುಕ್ರವಾರ ಕೂಡ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ, ಶನಿವಾರದಿಂದ ಎರಡು ದಿನ ಆರೆಂಜ್ ಅಲರ್ಟ್ ಇರಲಿದೆ. ಸೋಮವಾರಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ 40-50 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News