ಕೋಟತಟ್ಟು ಸಂಪೂರ್ಣ ಲಾಕ್‌ಡೌನ್: ಅಗತ್ಯವಸ್ತುಗಳ ಖರೀದಿಗೆ ಅವಕಾಶ

Update: 2021-06-10 15:43 GMT

ಕೋಟ, ಜೂ.10: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಸಂಪೂರ್ಣ ಲಾಕ್‌ಡೌನ್ ಆಗಿರುವ ಕೋಟತಟ್ಟು ಗ್ರಾಪಂ ವ್ಯಾಪ್ತಿಯಲ್ಲಿ ಜನರಿಗೆ ಇಂದು ಬೆಳಗ್ಗೆ ಆರು ಗಂಟೆಯಿಂದ ಮಧ್ಯಾಹ್ನ 12 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಯಿತು.

ಕೋಟತಟ್ಟು ಗ್ರಾಮದ 10 ಕಡೆಗಳಲ್ಲಿ ಬ್ಯಾರೀಕೆಡ್ ಹಾಗೂ ರಿಬ್ಬನ್ನನ್ನು ಕಟ್ಟಿ ರಸ್ತೆಯನ್ನು ಬಂದ್ ಮಾಡಿ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಮುಂದಿನ 5 ದಿನಗಳ ಕಾಲ ಈ ಗ್ರಾಮದಿಂದ ಇನ್ನೊಂದು ಗ್ರಾಮಕ್ಕೆ ಅಥವಾ ಅನಗತ್ಯವಾಗಿ ತಿರುಗಾಡದಂತೆ ಎಚ್ಚರಿಕೆ ನೀಡುವುದರ ಮೂಲಕ ಈ ಕುರಿತು ಜನರಿಗೆ ಮೈಕ್ ಮೂಲಕ ಮಾಹಿತಿ ನೀಡಲಾಯಿತು.

ಕೋಟ ಪೊಲೀಸ್ ಠಾಣಾಧಿಕಾರಿ ಸಂತೋಷ್ ಬಿ.ಪಿ. ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅನಗತ್ಯ ಓಡಾಡುವವರ ಮೇಲೆ ಕ್ರಿಮಿನಲ್ ಕೇಸ್ ಹಾಗೂ ವಾಹನ ಮುಟ್ಟುಗೋಲು ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೈಲಾ ಎಸ್.ಪೂಜಾರಿ, ಕೋಟ ಕಂದಾಯಾಧಿಕಾರಿ ರಾಜು, ಕೋಟ ಗ್ರಾಮಲೆಕ್ಕಿಗಾಧಿಕಾರಿ ಚಲುವರಾಜ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News