ದ.ಕ. ಜಿಲ್ಲೆಯ ಎಲ್ಲಾ ಕೇಂದ್ರಗಳಲ್ಲಿ ವಿದೇಶಕ್ಕೆ ಪ್ರಯಾಣಿಸುವ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ

Update: 2021-06-10 15:46 GMT
ಸಾಂದರ್ಭಿಕ ಚಿತ್ರ

ಮಂಗಳೂರು, ಜೂ.10: ಉದ್ಯೋಗ, ವ್ಯಾಸಂಗ ಮತ್ತಿತರ ಉದ್ದೇಶಕ್ಕಾಗಿ ವಿದೇಶಕ್ಕೆ ಪ್ರಯಾಣಿಸುವ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಮೊದಲ ಡೋಸ್ ಲಸಿಕೆ ಹಾಕಲು ಜಿಲ್ಲಾಡಳಿತ ವ್ಯವಸ್ಥೆ ಕಲ್ಪಿಸಿದೆ. ಅದರಂತೆ ಜೂ.14ರಿಂದ ಜಿಲ್ಲೆಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ನಗರ ಆರೋಗ್ಯ ಕೇಂದ್ರ ಸಹಿತ ಎಲ್ಲಾ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ವಿದೇಶಕ್ಕೆ ಪ್ರಯಾಣ ಬೆಳೆಸುವವರು ಪಾಸ್‌ಪೋರ್ಟ್, ವೀಸಾ ಅಥವಾ ಪ್ರಯಾಣದ ಟಿಕೇಟನ್ನು ದಾಖಲೆಯಾಗಿ ತೋರಿಸಿ ಸ್ಥಳೀಯ ಲಸಿಕಾ ಕೇಂದ್ರದಲ್ಲೇ ಮೊದಲ ಆದ್ಯತೆಯ ಮೇರೆಗೆ ಲಸಿಕೆ ಪಡೆಯಲು ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News