ಶಾಲಾ-ಕಾಲೇಜು ಶುಲ್ಕ ಪಾವತಿಗೆ ಒತ್ತಡ ಹೇರದಂತೆ ದ.ಕ. ಜಿಲ್ಲಾಧಿಕಾರಿ ಸೂಚನೆ

Update: 2021-06-10 16:00 GMT
ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.

ಮಂಗಳೂರು, ಜೂ.10: ವಿದ್ಯಾರ್ಥಿಗಳ ಶಿಕ್ಷಣ ಶುಲ್ಕ ಪಾವತಿಗೆ ಒತ್ತಡ ಹೇರದಂತೆ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಸ್ಪಷ್ಟ ಸೂಚನೆ ನೀಡಿದ್ದಾರೆ.

ಕೆಲವು ಶಾಲಾ, ಕಾಲೇಜಿನ ಮುಖ್ಯ ಶಿಕ್ಷಕರು, ಪ್ರಾಂಶುಪಾಲರು ಮತ್ತು ಆಡಳಿತ ಮಂಡಳಿಯವರು ವಿದ್ಯಾರ್ಥಿಗಳ ಹೆತ್ತವರ ಬಳಿ ಕಳೆದ ಶೈಕ್ಷಣಿಕ ವರ್ಷದ ಬಾಕಿ ಶುಲ್ಕವನ್ನು ಒಂದೇ ಕಂತಿನಲ್ಲಿ ಪಾವತಿಸಬೇಕು ಎಂದು ದೂರವಾಣಿ ಕರೆ ಮಾಡಿ ಒತ್ತಾಯಿಸುವುದು, ಪಾವತಿಸದಿದ್ದರೆ ಆನ್‌ಲೈನ್ ಪಾಠ ತಡೆಹಿಡಿಯಲಾಗುವುದು ಎಂದು ಎಚ್ಚರಿಸುವುದು, ವರ್ಗಾವಣೆ ಪತ್ರ ಕೊಡುವುದಿಲ್ಲ ಎನ್ನುವುದು, ಲೇಖನ ಸಾಮಗ್ರಿಗಳನ್ನು ನಿರ್ದಿಷ್ಟ ಅಂಗಡಿಗಳಲ್ಲಿ ಮಾತ್ರ ಪಡೆಯಬೇಕು ಎಂದು ಒತ್ತಡ ಹಾಕುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಆ ಹಿನ್ನಲೆಯಲ್ಲಿ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ, ಯಾವ ಕಾರಣಕ್ಕೂ ವಿದ್ಯಾರ್ಥಿಗಳ ಹೆತ್ತವರು, ಪೋಷಕರಲ್ಲಿ ಶುಲ್ಕ ಪಾವತಿಗಾಗಿ ಒತ್ತಡ ಹಾಕಬಾರದು. ಒಂದು ವೇಳೆ ಒತ್ತಡ ಹಾಕಿದ ಬಗ್ಗೆ ದೂರುಗಳು ಬಂದರೆ ಕಠಿಣ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News