×
Ad

​ಉಡುಪಿ: ಲಿಂಗತ್ವ ಅಲ್ಪಸಂಖ್ಯಾತರಿಗೆ ಕೋವಿಡ್ ಲಸಿಕೆ

Update: 2021-06-10 21:47 IST

ಉಡುಪಿ, ಜೂ.10: ಜಿಲ್ಲಾಡಳಿತ, ಉಡುಪಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ವತಿಯಿಂದ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಹಾಗೂ ದಮನಿತ ಮಹಿಳೆಯರಿಗೆ ಉಡುಪಿ ನಗರ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಇಂದು ಕೋವಿಡ್ ಲಸಿಕಾ ಶಿಬಿರವನ್ನು ಏರ್ಪಡಿಸಲಾಗಿತ್ತು.

ಶಿಬಿರದಲ್ಲಿ ಉಡುಪಿ ತಾಲೂಕಿನ 21ಮಂದಿ ಲಿಂಗತ್ವ ಅಲ್ಪಸಂಖ್ಯಾತರು ಕೋವಿಡ್ ವ್ಯಾಕ್ಸಿನ್ ಪಡೆದರು. ಕ್ಯಾಂಪ್‌ನ ನೋಡೆಲ್ ಅಧಿಕಾರಿ ಹಾಗೂ ಮಹಿಳಾ ಅಭಿವೃದ್ಧಿ ನಿಗಮದ ಅಭಿವೃದ್ಧಿ ನಿರೀಕ್ಷಕಿ ಚಂದ್ರಿಕಾ ಎಸ್ ನಾಯಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಚಿದಾನಂದ್ ಸಂಜು, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಹೇಮಂತ್, ಜಿಲ್ಲಾ ಏಡ್ಸ್ ನಿಯಂತ್ರಣಾ ಘಟಕದ ಸಂಯೋಜಕ ಮಹಾಬಲೇಶ್ವರ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News