ವಿಕಲಚೇತನರಿಗೆ ಲಸಿಕೆ ವಿತರಣೆಗೆ ತುರ್ತು ಕ್ರಮ ಕೈಗೊಳ್ಳಲು ಹೈಕೋರ್ಟ್ ನಿರ್ದೇಶನ

Update: 2021-06-10 17:25 GMT

ಬೆಂಗಳೂರು, ಜೂ.10: ಈವರೆಗೂ ಕರ್ನಾಟಕದ ಶೇ.35.53ರಷ್ಟು ವಿಕಲಚೇತನರಿಗೆ ಕೋವಿಡ್-19 ಲಸಿಕೆ ಹಾಕಲಾಗಿದೆ. ಉಳಿದವರಿಗೂ ಲಸಿಕೆ ಹಾಕಲು ತುರ್ತು ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ವಿಕಲಾಂಗ ವ್ಯಕ್ತಿಗಳಿಗೆ ಆದ್ಯತೆಯ ಆಧಾರದ ಮೇಲೆ ಕೋವಿಡ್-19 ಲಸಿಕೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ಈ ವೇಳೆ ನ್ಯಾಯಪೀಠಕ್ಕೆ ಮಾಹಿತಿ ನೀಡಿದ ಬಿಬಿಎಂಪಿ ಪರ ವಕೀಲ ಶ್ರೀನಿಧಿ, ಈಗಾಗಲೇ ಸ್ಲಂಗಳಲ್ಲಿ ವಾಸಿಸುವ 10 ಲಕ್ಷ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. 3ನೆ ಒಂದರಷ್ಟು ಸ್ಲಂ ನಿವಾಸಿಗಳಿಗೆ ಲಸಿಕೆ ನೀಡಲಾಗಿದೆ ಎಂದು ತಿಳಿಸಿದರು.

ಕೆಲ ಕೋವಿಡ್ ಕೇರ್ ಸೆಂಟರ್‍ಗಳನ್ನು ಮುಚ್ಚುವುದಾಗಿ ಬಿಬಿಎಂಪಿ ಆಯುಕ್ತರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ನ್ಯಾಯಪೀಠ, ಕೋವಿಡ್ ಹಾಗೂ ಟ್ರಯಾಸ್ ಸೆಂಟರ್ ಮುಚ್ಚಬೇಡಿ. ಮುಂದಿನ ಪರಿಸ್ಥಿತಿಗೆ ಸಿದ್ಧವಾಗಿರುವಂತೆ ಸಲಹೆ ನೀಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News