×
Ad

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಾಯಗಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ

Update: 2021-06-10 23:47 IST

ರಾಯಗಢ, ಜೂ. 10: ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಶುಕ್ರವಾರದ ವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೆ, 20 ಗ್ರಾಮಗಳಿಂದ 1 ಸಾವಿರಕ್ಕೂ ಅಧಿಕ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದೆ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸರಾಸರಿ 58 ಮಿಲ್ಲಿಮೀಟರ್ ಮಳೆ ಸುರಿದಿದೆ ಎಂದು ಜಿಲ್ಲಾಧಿಕಾರಿ ನಿಧಿ ಚೌಧರಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 

ಭಾರೀ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ಜಿಲ್ಲೆಯಲ್ಲಿ ಗುರುವಾರ ಹಾಗೂ ಶುಕ್ರವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 12 ಹಾಗೂ 13ರಂದು ಆರಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಧಾರಾಕಾರ ಮಳೆಗೆ ಭೂಕುಸಿತ ಸಂಭವಿಸುವ ಸಾಧ್ಯತೆ ಇದೆ. ಆದುದರಿಂದ 20 ಗ್ರಾಮಗಳಿಂದ 1,139 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ನೈಋತ್ಯ ಮನ್ಸೂನ್ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಕರಾವಳಿಗೆ ಆಗಮಿಸಲಿದೆ ಎಂದು ಭಾರತ ಹವಾಮಾನ ಇಲಾಖೆ ಶನಿವಾರ ದೃಢಪಡಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News