ಹಾಸನದಲ್ಲಿ ಇಂಧನ ತೈಲ ಬೆಲೆಯೇರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

Update: 2021-06-11 06:41 GMT

ಹಾಸನ, ಜೂ.11: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಡೈರಿ ವೃತ್ತ, ಬೆಂಗಳೂರು ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಎದುರು  ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ ನೇತೃತ್ವದಲ್ಲಿ ಇಂದು ಸರಕಾರದ ವಿರುದ್ಧ ಪ್ರತಿಭಟನೆ ನಡೆಯಿತು.

ಬನವಾಸೆ ರಂಗಸ್ವಾಮಿ ಮಾತನಾಡಿ,​ ಈ ಸಂಕಷ್ಟಕರ ಕಾಲಘಟ್ಟದಲ್ಲಿ ಇಂಧನ ತೈಲ ದರವನ್ನು 44 ಬಾರಿ ಏರಿಕೆ ಮಾಡುವ ಮೂಲಕ ಇದೀಗ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರು ಬಿಜೆಪಿ ಸರಕಾರಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹಾಸನ ನಗರಕ್ಕೆ ಆಗಮಿಸಿದ್ದು, ಹಾಸನಕ್ಕೆ ಯಾವ ಅಭಿವೃದ್ಧಿ ಕೆಲಸ ಮಾಡದೇ ಮಲತಾಯಿ ಧೋರಣೆ ಮಾಡುತ್ತಿದ್ದಾರೆ. ಮುಖ್ಯಮಂತ್ರಿಯ ತವರು ಕ್ಷೇತ್ರ ಶಿವಮೊಗ್ಗ ಮತ್ತು ಬೆಂಗಳೂರಿನಲ್ಲಿ ಮಾತ್ರ ಅಭಿವೃದ್ಧಿಗೆ ಗಮನ ಕೊಟ್ಟು ಹೆಚ್ಚಿನ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಇದೆವೇಳೆ ಕಾಂಗ್ರೆಸ್ ಮುಖಂಡರಾದ ಬನವಾಸೆ ರಂಗಸ್ವಾಮಿ, ಕೆಲವತ್ತಿ ಸೋಮಶೇಖರ್, ಬಸವರಾಜು, ಬಾಲಶಂಕರ್, ಕುಮಾರಸ್ವಾಮಿ ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News