ಡಿಸಿಎಂ ಡಾ.‌ಅಶ್ವತ್ಥನಾರಾಯಣರನ್ನು ಭೇಟಿಯಾದ ವಿವಿಧ ಮಠಗಳ 30ಕ್ಕೂ ಅಧಿಕ ಸ್ವಾಮೀಜಿಗಳು

Update: 2021-06-11 07:34 GMT

ಬೆಂಗಳೂರು, ಜೂ.11: ವಿವಿಧ ಜಿಲ್ಲೆಗಳ, ವಿವಿಧ ಮಠಗಳ ಮೂವತ್ತಕ್ಕೂ ಹೆಚ್ಚು ಸ್ವಾಮೀಜಿಗಳು ಶುಕ್ರವಾರ ಬೆಳಗ್ಗೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.

ನಗರದ ಡಾಲರ್ಸ್‌ ಕಾಲನಿಯಲ್ಲಿರುವ ಡಿಸಿಎಂ ನಿವಾಸಕ್ಕೆ ಆಗಮಿಸಿದ ರಾಮನಗರ, ತುಮಕೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಸ್ವಾಮೀಜಿಗಳು, ಮಾಗಡಿ ತಾಲೂಕಿನಲ್ಲಿರುವ ಸಂಸ್ಕೃತ ವಿಶ್ವವಿದ್ಯಾನಿಲಯದ ತ್ವರಿತ ಅಭಿವೃದ್ಧಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದರು.

ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ ಹುದ್ದೆಗೆ ಕನ್ನಡಿಗರನ್ನೇ ನೇಮಕ ಮಾಡುವುದು ಹಾಗೂ ಸಂಸ್ಕೃತ ಪ್ರಸರಣಕ್ಕೆ ಸೂಕ್ತ ಪ್ರೋತ್ಸಾಹ ಹಾಗೂ ಬಯಲುಸೀಮೆಯ ಈ ಜಿಲ್ಲೆಗಳಿಗೆ ನೀರಾವರಿ ಒದಗಿಸುವ ಬಗ್ಗೆ ಸ್ವಾಮೀಜಿಗಳು ಡಿಸಿಎಂ ಜತೆ ಮಾತುಕತೆ ನಡೆಸಿದರು.

ಅಖಿಲ ಭಾರತ ಸನಾತನ ಮಠಾಧಿಪತಿಗಳ ಒಕ್ಕೂಟದ ಸೇವಾ ಟ್ರಸ್ಟ್‌ ವತಿಯಿಂದ ಕೊಳದ ಮಠದ ಶ್ರೀ ಶಾಂತವೀರ ಸ್ವಾಮೀಜಿ, ಶ್ರೀ ಬಸವಲಿಂಗ ಸ್ವಾಮೀಜಿ, ತುಮಕೂರು ಹಿರೇಮಠದ ಶ್ರೀ ಶಿವಕುಮಾರ ಶಿವಾಚಾರ್ಯ ಸ್ವಾಮೀಜಿ, ಸೋಲೂರು ಚಿಲುಮ ಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಭದ್ರಗಿರಿ ಮಠದ ಶ್ರೀ ವೀರಭದ್ರ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತಮ್ಮಿಡಿಹಳ್ಳಿ ಮಠದ ಶ್ರೀ ಸಿದ್ದಲಿಂಗ ದೇಶಿಕೇಂದ್ರ ಸ್ವಾಮೀಜಿ ಸೇರಿದಂತೆ ಅನೇಕ ಸ್ವಾಮೀಜಿಗಳು ಆಗಮಿಸಿದ್ದರು.

ಸ್ವಾಮೀಜಿ ನೀಡಿದ ಮನವಿ ಸ್ವೀಕರಿಸಿದ ಡಿಸಿಎಂ,ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News