ಬಿಜೆಪಿ ನಾಯಕ ಮುಕುಲ್ ರಾಯ್ ಇಂದು ಮಮತಾ ಬ್ಯಾನರ್ಜಿಯವರನ್ನು ಭೇಟಿಯಾಗುವ ಸಾಧ್ಯತೆ

Update: 2021-06-11 07:43 GMT

ಕೋಲ್ಕತಾ: ಈ ಹಿಂದೆ  ಮಮತಾ ಬ್ಯಾನರ್ಜಿಯವರ ಆಪ್ತರಾಗಿದ್ದ  ಮುಕುಲ್ ರಾಯ್ ಅವರು ಬಿಜೆಪಿಗೆ ಹೆಚ್ಚಿನ ಅಭಿಮಾನಿಗಳೊಂದಿಗೆ ಸೇರಿಕೊಂಡಿದ್ದರು, ಇದೀಗ ಅವರು ತಮ್ಮ ಪುತ್ರ ಸುಬ್ರಾಂಗ್‌ಶು ರಾಯ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್ಸಿಗೆ ಮರಳುವ ಸಾಧ್ಯತೆಯಿದೆ ಎಂದು India Today ವರದಿ ಮಾಡಿದೆ.

ಮುಕುಲ್ ರಾಯ್ ಅವರು ಶುಕ್ರವಾರ ಮಧ್ಯಾಹ್ನ ಟಿಎಂಸಿ ಕೇಂದ್ರ ಕಚೇರಿಯಲ್ಲಿ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿಯವರನ್ನು ಪುತ್ರ ಸುಬ್ರಾಂಗ್‌ಶು ಅವರೊಂದಿಗೆ ಭೇಟಿಯಾಗುವ ಸಾಧ್ಯತೆ ಇದೆ. ಮಮತಾ ಬ್ಯಾನರ್ಜಿ ಅವರು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಟಿಎಂಸಿ ಕೇಂದ್ರ ಕಚೇರಿಯಲ್ಲಿ ಪೂರ್ವನಿರ್ಧರಿತ ಸಭೆ ನಡೆಸಲಿದ್ದಾರೆ.

ಟಿಎಂಸಿ ಸಂಸದ ಹಾಗೂ  ಮಮತಾ ಬ್ಯಾನರ್ಜಿಯ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಕೂಡ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.

ಮುಕುಲ್ ರಾಯ್ ಟಿಎಂಸಿಯನ್ನು ತ್ಯಜಿಸಿದ ನಂತರ, ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಅವರನ್ನು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಯಿತು.

ಮಮತಾ ಬ್ಯಾನರ್ಜಿಯ ಮಾಜಿ ಲೆಫ್ಟಿನೆಂಟ್ ಮುಕುಲ್ ರಾಯ್, ಅಭಿಷೇಕ್ ಬ್ಯಾನರ್ಜಿಯೊಂದಿಗಿನ ಭಿನ್ನಾಭಿಪ್ರಾಯಗಳು ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಪಕ್ಷದ ಉನ್ನತ ನಾಯಕತ್ವದೊಂದಿಗೆ ಭಿನ್ನಾಭಿಪ್ರಾಯದಿಂದಾಗಿ ಟಿಎಂಸಿಯನ್ನು ತೊರೆದಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News