ಹಿರಿಯ ಕವಿ ಸಿದ್ದಲಿಂಗಯ್ಯ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಸಂತಾಪ

Update: 2021-06-11 16:29 GMT

ಬೆಂಗಳೂರು: ಪ್ರಸಿದ್ಧ ಬಂಡಾಯ ಸಾಹಿತಿ, ದಲಿತ ಕವಿ ಮತ್ತು ವಿಧಾನ ಪರಿಷತ್‍ನ ಮಾಜಿ ಸದಸ್ಯರೂ ಆದ ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್‍ ಕುಮಾರ್ ಕಟೀಲು ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. 

ಡಾ.ಸಿದ್ದಲಿಂಗಯ್ಯನವರು ಕನ್ನಡದ ಪ್ರಮುಖ ಲೇಖಕರಲ್ಲೊಬ್ಬರು. ‘ದಲಿತ ಕವಿ' ಎಂದೇ ಪ್ರಸಿದ್ಧರಾದ ಅವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ- ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು. ಪಂಪ ಪ್ರಶಸ್ತಿ, ನೃಪತುಂಗ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹತ್ತಾರು ಪ್ರಶಸ್ತಿಗಳು ಅವರಿಗೆ ಲಭಿಸಿದ್ದವು ಎಂದು ನಳಿನ್‍ ಕುಮಾರ್ ಅವರು ಸ್ಮರಿಸಿದ್ದಾರೆ.

ಮೃತರ ಕುಟುಂಬ, ಬಂಧುಮಿತ್ರರಿಗೆ ಮತ್ತು ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ನಳಿನ್‍ ಕುಮಾರ್ ಕಟೀಲು ಅವರು ಪ್ರಾರ್ಥಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News