ದ.ಕ., ಉಡುಪಿ ಜಿಲ್ಲಾ ಆಂಗ್ಲ ಮಾಧ್ಯಮ ಶಾಲಾ ಒಕ್ಕೂಟದಿಂದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಭೇಟಿ
Update: 2021-06-12 10:59 IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಖಾಸಗಿ ಶಾಲೆಗಳ ಬಗ್ಗೆ ಪತ್ರಿಕಾ ಮಾಧ್ಯಮದಲ್ಲಿ ನೀಡಿದ ಹೇಳಿಕೆಯನ್ನು ಮರುಪರಿಶೀಲಿಸಬೇಕು ಎಂದು ದ.ಕ., ಉಡುಪಿ ಜಿಲ್ಲಾ ಆಂಗ್ಲ ಮಾಧ್ಯಮ ಶಾಲಾ ಒಕ್ಕೂಟದ ವತಿಯಿಂದ ಮನವಿ ನೀಡಿ, ಖಾಸಗಿ ಆಂಗ್ಲ ಮಾಧ್ಯಮ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಜಿಲ್ಲಾಧಿಕಾರಿ ಅವರಿಗೆ ವಿವರಿಸಿದರು.
ಮನವಿಯನ್ನು ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ನೀವು ಹೇಳುವುದು ಸರಿ ಇದೆ ಎಂದು ಹೇಳಿದರು.
ಈ ಸಂದರ್ಭ ದ.ಕ. ಮತ್ತು ಉಡುಪಿ ಜಿಲ್ಲೆಯ ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದ ಕೋಶಾಧಿಕಾರಿ ಸೀತಾರಾಮ ರೈ ಸವಣೂರು, ಉಪಾಧ್ಯಕ್ಷ ಮೂಸಬ್ಬಪಿ. ಬ್ಯಾರಿ, ಕಾರ್ಯದರ್ಶಿ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು, ಜತೆ ಕಾರ್ಯದರ್ಶಿ ಜಯಸೂರ್ಯ ರೈ, ಅಶ್ವಿನ್ ಶೆಟ್ಟಿ ಹಾಗು ಇತರರು ಉಪಸ್ಥಿತರಿದ್ದರು.