×
Ad

ಜಮ್ಮು-ಕಾಶ್ಮೀರ: ಭಯೋತ್ಪಾದಕ ದಾಳಿ; ಇಬ್ಬರು ಪೊಲೀಸರು, ನಾಗರಿಕರು ಮೃತ್ಯು

Update: 2021-06-12 13:41 IST
ಸಾಂದರ್ಭಿಕ ಚಿತ್ರ

ಜೈಪುರ: ಜಮ್ಮು ಹಾಗೂ  ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ಪಟ್ಟಣದಲ್ಲಿ ಶನಿವಾರ ನಡೆದ ಭಯೋತ್ಪಾದಕ ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ  ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಬ್ಬರು ಪೊಲೀಸರು ಮತ್ತು ಇಬ್ಬರು ನಾಗರಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಪೊಲೀಸರು ಸೇರಿದಂತೆ ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ದಾಳಿಯಲ್ಲಿ ಇಬ್ಬರು ಪೊಲೀಸರು ಹಾಗೂ  ಇಬ್ಬರು ನಾಗರಿಕರು ಸಾವನ್ನಪ್ಪಿದ್ದಾರೆ. ಇತರ ಮೂವರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ವಿಜಯ್ ಕುಮಾರ್ ಹೇಳಿದ್ದಾರೆ.

ಮೂಲಗಳ ಪ್ರಕಾರ, ಉತ್ತರ ಕಾಶ್ಮೀರದ ಸೊಪೋರ್‌ನ ಅರಂಪೋರಾ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರು ಪೊಲೀಸ್ ಹಾಗೂ  ಸಿಆರ್‌ಪಿಎಫ್ ಜಂಟಿ ತಂಡದ ಮೇಲೆ ಗುಂಡು ಹಾರಿಸಿದ್ದಾರೆ.

 ಉಗ್ರರನ್ನು ಸೆರೆ ಹಿಡಿಯಲು ಈ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News