ಕನ್ನಡದಲ್ಲಿ ಐಬಿಪಿಎಸ್ ಪರೀಕ್ಷೆ ಬರೆಯಲು ಅವಕಾಶ: ಸಚಿವ ಡಾ.ಕೆ. ಸುಧಾಕರ್

Update: 2021-06-12 13:22 GMT

ಬೆಂಗಳೂರು, ಜೂ.12: ಬ್ಯಾಂಕಿಂಗ್ ಉದ್ಯೋಗ ನೇಮಕಾತಿಗೆ ನಡೆಸುವ ಐಬಿಪಿಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಕೇಂದ್ರ ಸರಕಾರ ಅವಕಾಶ ಕಲ್ಪಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

"ಕರ್ನಾಟಕದ ಮನವಿಗೆ ಸ್ಪಂದಿಸಿದ ಕೇಂದ್ರ ಸರಕಾರ ಬ್ಯಾಂಕಿಂಗ್ ಉದ್ಯೋಗ ನೇಮಕಾತಿಗೆ ನಡೆಸುವ ಐಬಿಪಿಸ್ ಪರೀಕ್ಷೆಯನ್ನು ಕನ್ನಡ ಮತ್ತು ಕೊಂಕಣಿಯಲ್ಲಿ ಬರೆಯಲು ಅವಕಾಶ ಕಲ್ಪಿಸಿದೆ. ಈ ನಿರ್ಧಾರದದಿಂದ ಕರ್ನಾಟಕದ ಸಾವಿರಾರು ಯುವ ಉದ್ಯೋಗಾಕಾಂಕ್ಷಿಗಳಿಗೆ, ವಿಶೇಷವಾಗಿ ನಮ್ಮ ಗ್ರಾಮೀಣ ಭಾಗದ ಯುವಕ ಯುವತಿಯರಿಗೆ, ಅನುಕೂಲವಾಗಲಿದೆ" ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News